ಬ್ರಹ್ಮಾವರ ಅಪಘಾತದಲ್ಲಿ ಮೃತಪಟ್ಟವಿದ್ಯಾರ್ಥಿ ವಂಶಿ ಜಿ ಶೆಟ್ಟಿ ಪೋಷಕರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ನೀಡಿದ ಸರ್ವ ಕಾಲೇಜು ವಿದ್ಯಾರ್ಥಿಶಕ್ತಿ ನಿಯೋಗ

108

ಬ್ರಹ್ಮಾವರ NH-66 ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಸಾವನಪ್ಪಿದ ವಂಶಿ ಜಿ. ಶೆಟ್ಟಿ ವಿದ್ಯಾರ್ಥಿ ಮನೆಯವರಿಗೆ ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸುವುದು ಮತ್ತು ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಓವರ್ ನಿರ್ಮಾಣ ಮಾಡುವ ಕುರಿತುಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ನಿಯೋಗ ದಿಂದ ಜಿಲ್ಲಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತುಉಡುಪಿ ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ ಮನವಿಯನ್ನು ಸಲ್ಲಿಸಿರುತ್ತೇವೆ.ಈ ವಿಚಾರವಾಗಿ ಯಾರೂ ಕೂಡ ಗಮನ ಹರಿಸದಿದ್ದದ್ದು ಬೇಸರದ ಸಂಗತಿಯಾಗಿದೆ. ಈ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಜಾಸ್ತಿಯಾಗುತ್ತಿದ್ದು ದಿನಾಂಕ: 01-04-2025ರಂದು ಬೆಳಿಗ್ಗೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆಗೆ ಹೋಗುವ ಸಂದರ್ಭದಲ್ಲಿ ರಸ್ತೆದಾಟುವಾಗ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿಎಂಬ ಬಾಲಕನು ಅಪಘಾತದಲ್ಲಿ ಸಾವನ್ನಪ್ಪಿದ್ದು, ಈ ಬಾಲಕನ ಕುಟುಂಬದವರಿಗೆ ಯಾವುದೇ ಪರಿಹಾರ ನೀಡದಿರುವುದರಿಂದ ಈ ಕೂಡಲೇ ಜಿಲ್ಲಾಡಳಿತ ಮತ್ತು ಸಂಬಂಧ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಿ ಕೊಡುವಂತೆ ಹಾಗೂ ಆಭಾಗದಲ್ಲಿ ಪೈಓವರ್ ನಿರ್ಮಿಸುವಂತೆ ತಮ್ಮಲ್ಲಿ ಮನವಿ ಮಾಡಲಾಯಿತುಈ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿ ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ಮಾಡಿ ಪೋಷಕರಿಗೆ ಧೈರ್ಯ ತುಂಬ ಕೆಲಸವನ್ನು ಮಾಡಿದ್ದೇನೆನೀವು ನೀಡಿದ ಮನವಿಯನ್ನು ಪರಿಶೀಲನೆ ಮಾಡಿ ಪರಿಹಾರ ಹಾಗೂ ಫ್ಲೈ ಓವರ್ ಬಗ್ಗೆ ಸಭೆ ಕರೆದು ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರುಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯ ಸಂಸ್ಥಾಪಕರಾದ ಶಿವಕುಮಾರ್ ಕರ್ಜೆ ರಾಜ್ಯಾಧ್ಯಕ್ಷರಾದ ರಚನ್ ಸಾಲಿಯಾನ್, ಪ್ರಮುಖರಾದ ವಿದಿತ್ ನಾಗರಾಜ್. ಮನಿಷ್ ಪೂಜಾರಿ, ವಂಶಿತ್ ಶೆಟ್ಟಿ, ಕಿರಣ್ ಶೆಟ್ಟಿ, ಧನುಷ್ ಆಚಾರ್ಯ, ಸೌರವ್ ಪೂಜಾರಿ ಸಂತೋಷ್ ಪಡುಬಿದ್ರಿ , ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...