ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ ಕೇಂದ್ರ ಸರಕಾರ ಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗ್ರಹ

3

” ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಂಗಳವಾರ ನಡೆದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡುವ ವಿಚಾರ ತರಬೇಕು ಎಂದು ರಾಜ್ಯದ ಜನರ ಹಾಗೂ ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡುತ್ತೇನೆಂದು ಹೇಳಿದರು.

ಅನ್ನ ಕೊಟ್ಟು, ಅಕ್ಷರ ಕಲಿಸಿದ ಮಹಾಚೇತನರಿಗೆ ನಾವು ಇಂದು ನಮಿಸಲು ಬಂದಿದ್ದೇವೆ. ನಾನು ಶಾಲೆಯಲ್ಲಿದ್ದಾಗ ನಮ್ಮ ಶಿಕ್ಷಕರು ನನಗೆ ಒಂದು ಕತೆ ಹೇಳಿದ್ದರು.

ಅಲೆಕ್ಸಾಂಡರ್ ಭಾರತವನ್ನು ಗೆಲ್ಲಲು ಆಕ್ರಮಣ ಮಾಡುವ ಮುನ್ನ ಗುರುಗಳನ್ನು ಭೇಟಿ ಮಾಡಲು ಹೋದಾಗ, ಅವರ ಗುರು ಒಂದು ಮಾತು ಹೇಳಿದರು. ಭಾರತದಿಂದ ನೀನು ಬರುವಾಗ ರಾಮಾಯಣ, ಮಹಾಭಾರತ ಗ್ರಂಥ, ಕೃಷ್ಣನ ಕೊಳಲು,

ಗಂಗಾ ಜಲ ಹಾಗೂ ತತ್ವಜ್ಞಾನಿಯನ್ನು ನಿನ್ನ ಜತೆ ತೆಗೆದುಕೊಂಡು ಬಾ, ಈ ಐದು ವಸ್ತುಗಳನ್ನು ನೀನು ತಂದರೆ ಇಡೀ ಭಾರತವನ್ನು ಗೆದ್ದುಕೊಂಡು ಬಂದಂತೆ ಎಂದು ಹೇಳಿದರು. ಅದೇ ರೀತಿ ನಮ್ಮ ಸಂಸ್ಕೃತಿ ಈ ದೇಶದ ಆಸ್ತಿ. ಇಡೀ ವಿಶ್ವದ ಜನ ನಮ್ಮ ಆಚಾರ ವಿಚಾರಗಳನ್ನು ನಂಬಿ ಶರಣಾಗಿದ್ದಾರೆ ಎಂದು ತಿಳಿಸಿದರು,

ಧರ್ಮ ಎಂದರೆ ಮನುಷ್ಯತ್ವ. ಮನುಷ್ಯತ್ವ ರೂಪಿಸುವ ಪವಿತ್ರ ಕೆಲಸವನ್ನು ಶ್ರೀಗಳು ಮಾಡಿದ್ದಾರೆ. ಈ ಮಠದಲ್ಲಿ ಬಡವ ಶ್ರೀಮಂತ, ಜಾತಿ ಧರ್ಮ, ಮೇಲು ಕೀಳು ತಾರತಮ್ಯವಿಲ್ಲ. ಹೀಗಾಗಿ ಈ ಮಠಕ್ಕೆ ದೊಡ್ಡ ಹೆಸರಿದೆ. ಇದನ್ನು ನಾವು ನೀವು ಉಳಿಸಿಕೊಂಡು ಹೋಗಬೇಕು ಎಂದರು.

ಬಳಿಕ ಮಾತನಾಡಿದ ಸೋಮಣ್ಣ ಅವರು ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಡುವ ಕುರಿತು ಗೃಹ ಸಚಿವಾಲಯದ ಪ್ರಸ್ತಾವನೆಗೆ ಪ್ರತಿಕ್ರಿಯಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದರು. ಸಿದ್ದರಾಮಯ್ಯ ನಾಳೆ ದೆಹಲಿಗೆ ಬರ್ತಿದ್ದಾರೆ. ದೆಹಲಿಯಲ್ಲಿ ಕನ್ನಡ ಭವನ ಉದ್ಘಾಟನೆಗೆ ಬರ್ತಿದ್ದಾರೆ.

ರೈಲ್ವೆ ಸ್ಟೇಷನ್ ಮಾಡೋದು ಕೇಂದ್ರ ಸರ್ಕಾರ. ಸಿದ್ದರಾಮಯ್ಯ ಯಾಕೆ ಇನ್ನು ಫೈಲ್ ನೋಡಿಲ್ಲ ಅಂತ ಗೊತ್ತಿಲ್ಲ. ಪರಮೇಶ್ವರ್, ರಾಜಣ್ಣ, ಡಿಸಿಎಂ ಶಿವಕುಮಾರ್ ಅವರ ಗಮನಕ್ಕೂ ತರುತ್ತೇನೆ.

ನಾಳೆ ಸ್ವತಃ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇನೆ. ಫೈಲ್ ಕಳುಹಿಸಿ ಐದು ತಿಂಗಳ ಮೇಲಾಗಿದೆ. ನಾನು ಇದಕ್ಕೆ ಉಪ್ಪು-ಖಾರ ಹಾಕಲ್ಲ. ಶ್ರೀಮಠ ಯಾರಿಗೂ ಸೀಮಿತವಲ್ಲ ಎಂದರು

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...