ವಕ್ಫ್ ತಿದ್ದುಪಡಿ ಮಸೂದೆ-2025 ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜುರಿಂದ ರಾಜ್ಯಸಭೆಯಲ್ಲಿ ಮಂಡನೆ

2

“ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಿದರು.

ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು, ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ.

ರಾಜ್ಯಸಭೆ ಮತ್ತು ಲೋಕಸಭೆ ಎರಡರ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (JPC)ಯನ್ನು ರಚಿಸಲಾಯಿತು, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು ಎಂದರು. ಭಾರತದಲ್ಲಿ ಅಪಾರ ಪ್ರಮಾಣದ ವಕ್ಫ್ ಆಸ್ತಿಗಳನ್ನು ಸಚಿವರು ಎತ್ತಿ ತೋರಿಸಿದರು

ಇಂದು ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006 ರಲ್ಲಿ, ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂಪಾಯಿ ಆದಾಯ ಬರುತ್ತದೆ ಎಂದು ಆದಾಯವನ್ನು ಅಂದಾಜಿಸಿದೆ. ಈ ಆಸ್ತಿಗಳಿಂದ ಅಪಾರ ಪ್ರಮಾಣದ ಆದಾಯ ಬರುತ್ತದೆ ಎಂದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವಂತೆ ಅವರು ಒತ್ತಾಯಿಸಿದರು.

ನಿನ್ನೆ ಲೋಕಸಭೆಯಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷದ ಇಂಡಿಯಾ ಒಕ್ಕೂಟ ನಡುವೆ 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಬಿಸಿಬಿಸಿ ಚರ್ಚೆ ನಂತರ ವಕ್ಫ್ (ತಿದ್ದುಪಡಿ) ಮಸೂದೆ, 2025 ನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾದವು.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...