ಬೆಂಗಳೂರು ಯುವತಿ ಅಪಹರಣ ಅತ್ಯಾಚಾರ ಆರೋಪಿ ಆಸಿಫ್ ಸಹಿತ ಇಬ್ಬರ ಬಂಧನ

40

“ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ.

ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಘಟನೆ ಸಂಬಂಧ ಮಹದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಇದಕ್ಕೂ ಮುನ್ನ, ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಳು.

ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. ಬಳಿಕ, ಊಟಕ್ಕಾಗಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್ ಅಡ್ಡಗಟ್ಟಿದ್ದಾರೆ.

ಅಪರಿಚಿತರು ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ದುಷ್ಕೃತ್ಯದ ವೇಳೆ ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಒಬ್ಬ ಆರೋಪಿಯನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.

ಮಹದೇವಪುರ ಪೊಲೀಸರು ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...