ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಸವಾಲು

32

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸವಾಲು ಹಾಕಿದ್ದಾರೆ.

ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಕೇಸರಿ ಪಕ್ಷವು ಮುಸ್ಲಿಮರನ್ನು ಇಷ್ಟಪಡದಿದ್ದರೆ ತನ್ನ ಪಕ್ಷದ ಧ್ವಜದಿಂದ ಹಸಿರು ಬಣ್ಣವನ್ನು ತೆಗೆದುಹಾಕಬೇಕು ಎಂದರು.

ಮಸೂದೆಯ ಬಗ್ಗೆ ಬಿಜೆಪಿಯ ಮೋಸದ ನಿಲುವು ಮತ್ತು ಭೂಮಿಯನ್ನು ಕಿತ್ತು ತನ್ನ ಕೈಗಾರಿಕೋದ್ಯಮಿ ಸ್ನೇಹಿತರಿಗೆ ನೀಡುವ ತಂತ್ರವನ್ನು ತಮ್ಮ ಪಕ್ಷವು ವಿರೋಧಿಸಿದೆ ಎಂದು ತಿಳಿಸಿದರು.

ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ತೋರಿದ “ಕಾಳಜಿ” ಪಾಕಿಸ್ತಾನದ ಸಂಸ್ಥಾಪಕ ಮಹಮ್ಮದ್ ಅಲಿ ಜಿನ್ನಾ ಅವರನ್ನು ನಾಚಿಕೆಪಡಿಸುವಂತಿತ್ತು ಎಂದು ಟೀಕಿಸಿದರು.

ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರದಲ್ಲಿದ್ದು, ಕೆಲಸ ಕಾರ್ಯಗಳು ಸಾಂಗವಾಗಿ ನಡೆಯುತ್ತಿದ್ದರೂ ಅದು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಎತ್ತಿ ಹಿಡಿಯುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಸುಂಕದ ಅಪಾಯ ಮತ್ತು ಅದನ್ನು ತಗ್ಗಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ದೇಶಕ್ಕೆ ತಿಳಿಸಬೇಕಿತ್ತು ಎಂದು ಠಾಕ್ರೆ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...