ಹೊಸ ಪ್ರಾದೇಶಿಕ ಪಕ್ಷ ರಚನೆ ಹಿನ್ನೆಲೆ ಬಿಜೆಪಿಯಿಂದಉಚ್ಚಾಟನೆಗೊಂಡಿರುವ ಬಸವನಗೌಡ ಯತ್ನಾಳ್ ಜೊತೆಗೆ ಅಂತರ ಕಾಯ್ದುಕೊಂಡಿರುವ ಬೆಂಬಲಕ್ಕೆ ನಿಂತಿದ್ದ ಶಾಸಕರು

32

ಬಿಜೆಪಿಯಿಂದ ಉಚ್ಚಾಟಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯದಶಮಿ ವೇಳೆಗೆ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಆಲೋಚನೆಯಲ್ಲಿದ್ದಾರೆ.

ಇತ್ತ ಅವರು ಬಿಜೆಪಿಯಲ್ಲಿರುವಾಗ ಅವರೊಂದಿಗೆ ಗುರುತಿಸಿಕೊಂಡಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆಯ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ,

ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ.

ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...