ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಡಿ.ಕೆ. ಶಿವಕುಮಾರ್

65

“ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ಮಾಡುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಖಾಲಿ ಇರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಪಕ್ಷ ಇನ್ನೂ ಯಾವುದೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಹೇಳಿದ್ದಾರೆ.

ಪ್ರಸ್ತುತ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವಲ್ಲಿನ ವಿಳಂಬವು ಕಾಂಗ್ರೆಸ್ ಸರ್ಕಾರದ ಕಾರ್ಯತಂತ್ರದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. “ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿವೆ.

ಹೆಚ್ಚಿನ ಚರ್ಚೆಯ ಅಗತ್ಯವಿದೆ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ

ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್ ಗೆ ತಲುಪಿದೆ. ಮೇಲ್ಮನೆಯಲ್ಲಿ ಬಿಜೆಪಿ ಉತ್ತಮ ವಾಗ್ಮಿಗಳನ್ನು ಹೊಂದಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಎದುರಿಸಲು ಬಯಸುತ್ತದೆ ಎಂದರು.

ದೆಹಲಿಯಲ್ಲಿರುವ ರಾಷ್ಟ್ರೀಯ ನಾಯಕರು ಅಂತಿಮ ಆಯ್ಕೆ ಬಗ್ಗೆ ರಾಜ್ಯ ಘಟಕಕ್ಕೆ ತಿಳಿಸುವ ಮೊದಲು ವಿವರವಾಗಿ ಚರ್ಚಿಸುತ್ತಾರೆ ಎಂದು ಅವರು ಹೇಳಿದರು.

ಕೆಪಿಸಿಸಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಪಕ್ಷ ಹೇಳಿದಂತೆ ನಾನು ನಡೆಯುತ್ತೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕೆಲಸ ಮಾಡಿದ್ದೇನೆಪಕ್ಷಕ್ಕೆ ಯಾವುದು ಒಳ್ಳೆಯದೋ ಅದು ಆಗಲಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದರು.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...