ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ.1 ರಂದು ಸೇವೆ ಖಾಯಂ ಸಿಎಂ ಸಿದ್ದರಾಮಯ್ಯ ಘೋಷಣೆ

30

ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ.

ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು. ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಹೇಳಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ, ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ.

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸಿದ್ದು ನಾವು.

ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು.

ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...