ಮುಂಬೈ ಭಯೋತ್ಪಾದಕ ದಾಳಿ: ಉಗ್ರ ತಹವ್ವೂರ್‌ ರಾಣಾಗೆ ಹಿನ್ನಡೆ, ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್

62

ನ್ಯೂಯಾರ್ಕ್26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ  ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಮೆರಿಕಾ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.


ಪ್ರಸ್ತುತ ರಾಣಾ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿದ್ದು, ಕಳೆದ ಫೆಬ್ರವರಿಯಲ್ಲಿ ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಾಧೀಶರಿಗೆ ಹಸ್ತಾಂತರವನ್ನು ತಡೆಹಿಡಿಯಲು ತುರ್ತು ಅರ್ಜಿಯನ್ನು ಸಲ್ಲಿಸಿದ್ದರು

, ಆದರೆ, ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು. ನಂತರ, ರಾಣಾ ಮತ್ತೆ ತುರ್ತು ಅರ್ಜಿಯನ್ನು ಸಲ್ಲಿಸಿ ವಿನಾಯಿತಿ ಕೇಳಿದ್ದರು. ಆದರೆ, ಸುಪ್ರೀಂ ಕೋರ್ಟ್ ಈ ಮನವಿಯನ್ನು ನಿರಾಕರಿಸಿದೆ. 2009ರಿಂದಲೂ ರಾಣಾನನ್ನ ಭಾರತಕ್ಕೆ ಕರೆತರಲು ಭಾರತ ಹೋರಾಡುತ್ತಿದೆ.

ಇತ್ತೀಚೆಗೆ ಮೋದಿ ಅಮೆರಿಕಕ್ಕೆ ಭೇಟಿ ನೀಡಿದಾಗ ಟ್ರಂಪ್‌ ಮೋದಿ ಎದುರಲ್ಲೇ ಭಾರತಕ್ಕೆ ರಾಣಾನನ್ನ ಹಸ್ತಾಂತರಿಸುವುದಾಗಿ ಘೋಷಣೆ ಮಾಡಿದ್ದರು. ಇದೀಗ ಅಮೆರಿಕಾ ಸುಪ್ರೀಂಕೋರ್ಟ್‌ ರಾಣಾ ಮೇಲ್ಮನವಿಯನ್ನು ತಿರಸ್ಕರಿಸಿರುವುದು, ರಾಣಾನನ್ನು ಭಾರತಕ್ಕೆ ಮರಳಿ ಕರೆತರುವ ದಾರಿ ಮತ್ತಷ್ಟು ಸುಗಮವಾಗುವಂತೆ ಮಾಡಿದೆ.

ಮುಂಬೈ ದಾಳಿ ಬಳಿಕ ಪಾಕ್‌ನಿಂದ ಫಲಾಯನ ಮಾಡಿದ್ದ ರಾಣಾ, ಡೆನ್ಮಾರ್ಕ್‌ನಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದಕ್ಕಾಗಿ ಆತನನ್ನ ಅಮೆರಿಕದಲ್ಲಿ ಬಂಧಿಸಲಾಗಿತ್ತು.

2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು.

60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು.

ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ರಾಣಾ ಪಾತ್ರವಿದೆ ಎಂದು ಭಾರತ ಆರೋಪಿಸಿತ್ತು.

Leave a comment

Leave a Reply

Your email address will not be published. Required fields are marked *

Related Articles

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ...

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...