ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ

60

“ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್  ಪಡೆದಿದ್ದಾರೆ ಎಂಬುದು ಈಗ ಕೇಳಿಬಂದಿರುವ ಆರೋಪವಾಗಿದೆ

. ಸಿಎಂ ಕಿಕ್ ಬ್ಯಾಕ್ ಪಡೆದಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ

. ಇದು ಸಿಎಂ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪವಾಗಿದೆ. 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು.

ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ಆರೋಪಿಸಿದ್ದಾರೆ.

ಘೋಷಣೆ ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.

ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...