ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನಿಂದ ಏಪ್ರಿಲ್ 12 ರಿಂದ ರೈಲು ಸೇವೆ ಆರಂಭ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ

2

“ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು.

ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ.

ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು. ಕರ್ನಾಟಕದಲ್ಲಿ ಇದ್ದತಂಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ

. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ, ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಸತುವೆ ಮಾಡಲಾಗುತ್ತಿದೆ.

650 ಕೋಟಿ ರೂ. ವೆಚ್ಚದ 22 ಮೇಲ್ಸತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. 23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ.

ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

ಇನ್ನೂ ತುಮಕೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು 34 ಜನ ಶಾಸಕರು ಜಯಚಂದ್ರ ನೇತೃತ್ವದಲ್ಲಿ ದೆಹಲಿಗೆ ಬಂದು ನನಗೆ ಮನವಿ ಕೊಟ್ಟಿದ್ದಾರೆ.

ಅದನ್ನು ನಮ್ಮ ನಾಗರಿಕ ವಿಮಾನಯಾನ ಇಲಾಖೆ ಸಚಿವ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲೇ ಈ ಪ್ರಕ್ರಿಯೆ ಆಗಿತ್ತು ಎಂದರು.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...