ಬೆಂಗಳೂರು ನೈತಿಕ ಪೊಲೀಸ್ ಗಿರಿ ಹಿಂದೂ ಯುವಕನೊಂದಿಗೆ ಮಾತನಾಡುತ್ತಿದ್ದ ಮುಸ್ಲಿಂ ಮಹಿಳೆ ಮತ್ತು ಯುವಕನ ಮೇಲೆ ಹಲ್ಲೆ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರ ಬಂಧನ

46

“ನಗರದ ಚಂದ್ರಾ ಲೇಔಟ್‌ನಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಅವರ ಪ್ರಕಾರ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಯುವಕನೊಂದಿಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ.

‘ಈ ಸಂಬಂಧ ಮಹಿಳೆ ನಮಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ’ ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಈ ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಈ ಪ್ರಕರಣದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದೇವೆ’ ಎಂದು ಅವರು ಹೇಳಿದರು.”

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...