ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

2

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ಘೋಷಿಸಿದ್ದಾರೆ. 2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು. ಉಚ್ಚಾಟಿತ ಎಐಎಡಿಎಂಕೆ ನಾಯಕರಾದ ಓ ಪನ್ನೀರ್ಸೆಲ್ವಂ ಮತ್ತು ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಅವರನ್ನು ಮೈತ್ರಿಕೂಟದಲ್ಲಿ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಬಿಜೆಪಿ, ಎಐಎಡಿಎಂಕೆಯ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ತಮಿಳುನಾಡು ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧ ಆಯ್ಕೆ ಈ ಮೈತ್ರಿಕೂಟವು ಪರಸ್ಪರ ಹಿತಾಸಕ್ತಿಯಿಂದ ಹುಟ್ಟಿಕೊಂಡಿದೆ ಮತ್ತು ಎರಡೂ ಪಕ್ಷಗಳು ಈ ಹಿಂದೆ ಒಟ್ಟಿಗೆ ಚುನಾವಣೆ ಎದುರಿಸಿದ್ದವು ಎಂದು ಅಮಿತ್ ಶಾ ನೆನಪಿಸಿಕೊಂಡರು. ಪಳನಿಸ್ವಾಮಿ, ಹಿರಿಯ ಎಐಎಡಿಎಂಕೆ ನಾಯಕರಾದ ಕೆಪಿ ಮುನುಸಾಮಿ ಮತ್ತು ಎಸ್‌ಪಿ ವೇಲುಮಣಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನೈನಾರ್ ನಾಗೇಂದ್ರನ್ ಕೂಡ ಮೈತ್ರಿ ಘೋಷಣೆಯ ಸಮಯದಲ್ಲಿ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...