ಕಾರ್ಮಿಕರ ಕನಿಷ್ಠ ವೇತನ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಪ್ರಕಟ

2

ವಿವಿಧ ಕೌಶಲ ಸಹಿತ ಮತ್ತು ಕೌಶಲ ರಹಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಇಲಾಖೆ ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಿದೆ. ಪರಿಷ್ಕೃತ ಅಧಿಸೂಚನೆ ಪ್ರಕಾರ, ಶೌಚಾಲಯ, ಸ್ನಾನಗೃಹಗಳು, ಒಳ ಚರಂಡಿಗಳನ್ನು ಶುಚಿ ಮಾಡುವ ಕೆಲಸಗಾರರಿಗೆ ದಿನಕ್ಕೆ ರೂ. 989, ತಿಂಗಳಿಗೆ ರೂ. 21,251.30 ಆಗಿದೆ.

ಅತಿ ಕುಶಲ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ ದಿನಕ್ಕೆ 1,316 ಆಗಿದ್ದು, ತಿಂಗಳಿಗೆ ರೂ. 34,225. 42 ಆಗಿದೆ. ನುರಿತ ಎಲೆಕ್ಟ್ರಿಷಿಯನ್‌ಗಳಿಗೆ ದಿನಗೂಲಿ 1,196.69 ಮತ್ತು ತಿಂಗಳಿಗೆ 31,114.02 ರೂ. ಆಗಿದೆ. ಅರೆ ಕುಶಲ ಕಾರ್ಮಿಕರಿಗೆ ದಿನಕ್ಕೆ ರೂ. 1,087.90 ಆಗಿದ್ದು, ತಿಂಗಳಿಗೆ 28,285 ರೂ. ಆಗಿದೆ.

ಇತರ ವಲಯಗಳಲ್ಲಿ, ಹೆಚ್ಚು ಕೌಶಲ ಕೆಲಸಗಾರರಿಗೆ ಕನಿಷ್ಠ ದೈನಂದಿನ ವೇತನವು ದಿನಕ್ಕೆ ರೂ 1,196.69 ರಿಂದ ರೂ 989 ರಷ್ಟಿರುತ್ತದೆ ಆದರೆ ಕೌಶಲ್ಯರಹಿತ ಕೆಲಸಗಾರರು ದಿನಕ್ಕೆ ರೂ 743 ರಿಂದ ರೂ 899.09 ರವರೆಗಿನ ದೈನಂದಿನ ವೇತನಕ್ಕೆ ಅರ್ಹರಾಗಿರುತ್ತಾರೆ.ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. PlayUnmute ಫುಲ್ಲಸ್ಕ್ರೀನ್

ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ವೇತನ ಕಾಯ್ದೆ 1984ರ ಕಲಂ 5(1) (ಎ) ಹಾಗೂ 5(1) ಬಿ ರಡಿ ಇದುವರೆಗೂ 81 ಅಧಿಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾದ ವೇತನ ದರಗಳನ್ನು ನಿಗದಿಪಡಿಸಿ, ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗುತಿತ್ತು.

2022-23ನೇ ಸಾಲಿನಲ್ಲಿ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಸಂಬಂಧಿಸಿದ ಒಟ್ಟು 34 ಅನುಸೂಚಿತ ಉದ್ದಿಮೆಗಳಿಗೆ ಸದರಿ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಕನಿಷ್ಠ ವೇತನಕ್ಕೆ ಹೆಚ್ಚುವರಿಯಾಗಿ ಶೇ. 5 ರಿಂದ 10 ರಷ್ಟು ಏರಿಕೆ ಮಾಡಿದ ದರಗಳನ್ನು ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಸದರಿ ಅಧಿಸೂಚನೆಗಳನ್ನು ಎಐಟಿಯುಸಿ ಕಾರ್ಮಿಕ ಸಂಘದವರು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಿದ್ದರಿಂದ ಅದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನ್ವಯ ಕನಿಷ್ಠ ವೇತನ ಲೆಕ್ಕಾಚಾರ ಹಾಕಿ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಲಾಗಿತ್ತು.

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ವಿವಿಧ ಅನುಸೂಚಿತ ಉದ್ದಿಮೆಗಳಲ್ಲಿ ವಲಯವಾರು ಹಾಗೂ ಕುಶಲವಾರು ವೇತನ ದರದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ಎಲ್ಲಾ ವರ್ಗದ ಕಾರ್ಮಿಕರಿಗೂ ಸಮಾನವಾದ ಕನಿಷ್ಠ ವೇತನ ದೊರೆಯಬೇಕೆಂಬ

ಸದುದ್ದೇಶದಿಂದ ಈ ಹಿಂದೆ ಅನುಸೂಚಿತ ಉದ್ದಿಮೆವಾರು ಪ್ರತ್ಯೇಕವಾಗಿ ಅಧಿಸೂಚನೆಗಳನ್ನು ಹೊರಡಿಸುತ್ತಿದ್ದ ಕ್ರಮದ ಬದಲಾಗಿ ಏಕರೂಪ ಅಧಿಸೂಚನೆ ಹೊರಡಿಸಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...