thekarnatakatoday.com
State

ಡೀಸೆಲ್ ದರ ಏರಿಕೆ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

“ಡೀಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳ ಖಂಡಿಸಿ ಸೋಮವಾರ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ.

ಡೀಸೆಲ್ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರು ಏ.14ರವರೆಗೆ ಗಡುವು ನೀಡಿದ್ದರು.

ಆದರೆ, ಇದುವರೆಗೂ ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ಅವರು ತಿಳಿಸಿದ್ದಾರೆ.

ಇಂದು ಮಧ್ಯ ರಾತ್ರಿಯಿಂದಲೇ ರಾಜ್ಯದಲ್ಲಿರುವ ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಸೇವೆಯನ್ನು ಸ್ಥಗಿತಗೊಳಿಸಲಿದ್ದು, ಹಲವು ಸೇವೆಗಳಿಗೆ ಬಂದ್ ಬಿಸಿ ತಟ್ಟಲಿದೆ.

‘ಪೆಟ್ರೋಲ್, ಡೀಸೆಲ್ ಹಾಗೂ ಟೋಲ್ ದರಗಳ ಪರಿಷ್ಕರಣೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳ ಲಾರಿ ಮಾಲೀಕರು, ಪೆಟ್ರೋಲ್ ಬಂಕ್‌ಗಳ ಮಾಲೀಕರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ. ವಾಣಿಜ್ಯ ಸೇರಿದಂತೆ ಎಲ್ಲ ಸೇವೆಗಳು ಸ್ತಬ್ಧವಾಗಲಿವೆ” ಎಂದು ಜಿ.ಆರ್.ಷಣ್ಮುಖಪ್ಪ ಅವರು ಹೇಳಿದ್ದಾರೆ.

Related posts

ಆರ್‌ಸಿಬಿ ವಿಜಯೋತ್ಸವ  ಕಾಲ್ತುಳಿತಕ್ಕೆ 10 ಮಂದಿ ಬಲಿ 20ಕ್ಕೂ ಅಧಿಕ ಮಂದಿ  ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು

The Karnataka Today

ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ .ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್

The Karnataka Today

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ

The Karnataka Today

Leave a Comment

Join our WhatsApp community