ಜಾತಿ ಗಣತಿ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೆ ಮುಗಿದ ಸಚಿವ ಸಂಪುಟ ಸಭೆ ಮುಂದಿನ ಸಭೆಯಲ್ಲಿ ವಿಸ್ಕೃತ ಚರ್ಚೆ:: ಮುಖ್ಯಮಂತ್ರಿ ಸಿದ್ದರಾಮಯ್ಯ

2

“ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದು, ಈ ಕುರಿತು ಚರ್ಚಿಸಲು ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟವು ಯಾವುದೇ ಪ್ರಮುಖ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು.

ಅದಕ್ಕು ಮುನ್ನ ಲಿಖಿತವಾಗಿ ಅಥವಾ ಮೌಖಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಕೇಳಿಕೊಂಡಿದ್ದಾರೆ ಎಂದು ಹೇಳಿದರು.

ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಈ ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ

ಮತ್ತು ಇದನ್ನು “ಅವೈಜ್ಞಾನಿಕ” ಎಂದು ಕರೆದಿದ್ದಾರೆ. ಅಲ್ಲದೆ ವರದಿಯನ್ನು ತಿರಸ್ಕರಿಸಬೇಕು ಮತ್ತು ಹೊಸ ಸಮೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಸಚಿವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಯಾರೂ ಸಹ ಜಾತಿ ಗಣತಿ ವರದಿಯನ್ನು ವಿರೋಧಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳಬೇಕೋ ಅಥವಾ ನಿರಾಕರಣೆ ಮಾಡಬೇಕೋ ಎಂಬ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದು ಹಲವು ಸಚಿವರು ತಿಳಿಸಿದ್ದಾರೆ

. ಹೀಗಾಗಿ ಮೇ 2 ರಂದು ನಡೆಯುವ ಮುಂದಿನ ಸಚಿವ ಸಂಪುಟದಲ್ಲಿ ಮತ್ತೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...