ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಬೆಂಗಳೂರು ವಕೀಲ ಸಂಘದ ವಿರೋಧ

76

“ಉನ್ನತ ನ್ಯಾಯಾಲಯಗಳ ಮಟ್ಟದಲ್ಲಿ ‘ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯನ್ನು ತುಂಬುವ’ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದು, ಇದಕ್ಕೆ ಬೆಂಗಳೂರು ವಕೀಲರ ಸಂಘ (ಎಎಬಿ) ವಿರೋಧ ವ್ಯಕ್ತಪಡಿಸಿದೆ.

ಏಪ್ರಿಲ್ 19 ರಂದು ಕೊಲಿಜಿಯಂ ಮಾಡಿದ ನಿರ್ಣಯದ ಪ್ರಕಾರ, ಏಪ್ರಿಲ್ 15 ಮತ್ತು ಏಪ್ರಿಲ್ 19 ರಂದು ನಡೆದ ಸಭೆಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನಿರ್ಧಾರವನ್ನು ತೆಗೆದುಕೊಂಡಿದೆ


. ಕರ್ನಾಟಕ ಹೈಕೋರ್ಟ್‌ನಿಂದ ನ್ಯಾ. ಹೇಮಂತ್‌ ಚಂದ್ರಶೇಖರ್‌ ಅವರನ್ನು ಮದ್ರಾಸ್‌, ನ್ಯಾ. ಕೃಷ್ಣನ್‌ ನಟರಾಜನ್‌ ಅವರನ್ನು ಕೇರಳ, ನ್ಯಾ. ನೇರನಹಳ್ಳಿ ಶ್ರೀನಿವಾಸನ್‌ ಸಂಜಯ್‌ ಗೌಡ ಅವರನ್ನು ಗುಜರಾತ್‌, ನ್ಯಾ. ಶ್ರೀಪಾದ ಕೃಷ್ಣ ದೀಕ್ಷಿತ್‌ ಅವರನ್ನು ಒಡಿಶಾ ಹೈಕೋರ್ಟ್‌ಗಳಿಗೆ ಕಳಿಸಲಾಗಿದೆ.

ತೆಲಂಗಾಣದಿಂದ ನ್ಯಾ. ಪೆರುಗು ಶ್ರೀಸುಧಾ ಹಾಗೂ ಆಂಧ್ರಪ್ರದೇಶದಿಂದ ನ್ಯಾ. ಡಾ.ಕುಂಭಜಾಡಾಲ ಮನ್ಮಥ ರಾವ್‌ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ನ್ಯಾ. ಕಾಸೋಜು ಸುರೇಂದ್ರ ಅವರನ್ನು ತೆಲಂಗಾಣದಿಂದ ಮದ್ರಾಸ್‌ ಹೈಕೋರ್ಟ್‌ಗೆ ಕಳಿಸಲಾಗಿದೆ.


ವರ್ಗಾವಣೆಗೆ ಬೆಂಗಳೂರಿನ ವಕೀಲರ ಸಂಘ (AAB) ವಿರೋಧ ವ್ಯಕ್ತಪಡಿಸಿದ್ದು, ಶಿಫಾರಸು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಲ್ಲದೆ, ಹೈಕೋರ್ಟ್‌ನ ಸುವರ್ಣ ಮಹೋತ್ಸವ ದ್ವಾರದ ಬಳಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಅಲ್ಲದೆ, ಮುಂದಿನ ನಡೆ ಕುರಿತು ಚರ್ಚಿಸಲು ಇಂದು ಮಧ್ಯಾಹ್ನ 1.30 ಕ್ಕೆ ವಿಶೇಷ ಸಭೆ ನಡೆಸಲು ನಿರ್ಧರಿಸಿದೆ

. ವರ್ಗಾವಣೆಗೆ ಸಂಬಂಧಿಸಿದಂತೆ ಎಲ್ಲಾ ರಿಹಿಯ ವಕೀಲರೊಂದಿಗೆ ಸಭೆ ನಡೆಸಲಾಗಿದ್ದು, ನ್ಯಾಯಾಧೀಶರ ವರ್ಗಾವಣೆ ಕ್ರಮ ತಪ್ಪಾಗಿದೆ ಮತ್ತು ಅದನ್ನು ಹಿಂಪಡೆಯಬೇಕೆಂದು ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ಎಎಬಿ ಹೇಳಿಕೆಯಲ್ಲಿ ತಿಳಿಸಿದೆ.

ಅಲ್ಲದೆ, ವರ್ಗಾವಣೆ ಪ್ರಸ್ತಾವನೆಯನ್ನು ತಕ್ಷಣವೇ ಹಿಂಪಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಸದಸ್ಯರಿಗೆ, ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಕಾನೂನು ಸಚಿವರಿಗೆ ಮನವಿ ಪತ್ರಗಳನ್ನು ಕಳುಹಿಸುವುದಾಗಿ ತಿಳಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...