ಭಯೋತ್ಪಾದಕ ಕೃತ್ಯ ನಡೆಸುವವರಿಗೆ ಹಾಗೂ ಅವರನ್ನು ಬೆಂಬಲಿಸುವವರನ್ನು ಪ್ರಪಂಚದ ಯಾವ ಮೂಲೆಯಲ್ಲಿ ಅಡಗಿಕುಳಿತರು ಕೂಡ ಶಿಕ್ಷಿಸದೆ ಬಿಡೆವು

67

“ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ.

ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ’ ಎಂದು ಪ್ರಧಾನಿ ಮೋದಿ ಉಗ್ರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಭಯೋತ್ಪಾದಕರನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ನಮ್ಮ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ.

ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ನಮ್ಮೊಂದಿಗೆ ನಿಂತಿರುವ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ನಾನು ಈ ಸಮಯದಲ್ಲಿ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು

ಕಳೆದ ಮಂಗಳವಾರ ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ನಂತರ ಬಿಹಾರದಲ್ಲಿ ಇಂದು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾಷಣ ಆರಂಭಕ್ಕೆ ಪಹಲ್ಗಾಮ್ ದುರಂತದಲ್ಲಿ ಮೃತಪಟ್ಟ 26 ಮಂದಿಗೆ 2 ನಿಮಿಷ ಶ್ರದ್ಧಾಂಜಲಿ ಸಲ್ಲಿಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದೇಶದ ಅಮಾಯಕ ಜನರನ್ನು ಕೊಂದರು. ಈ ಘಟನೆ ನಂತರ ಇಡೀ ದೇಶ ದುಃಖಿತವಾಗಿದೆ ಮತ್ತು ನೋವಿನಲ್ಲಿದೆ. ಬಲಿಪಶುಗಳ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ.

ಭಯೋತ್ಪಾದಕರನ್ನು ಬಿಡಲಾಗುವುದಿಲ್ಲ, ಅವರ ವಿರುದ್ಧ ಬಲವಾದ ಕ್ರಮ ಕೈಗೊಳ್ಳಲಾಗುವುದು, ಶಿಕ್ಷೆ ಎಷ್ಟು ಕಠಿಣವಾಗಿರುತ್ತದೆ ಎಂದರೆ ಭಯೋತ್ಪಾದಕರು ಎಂದಿಗೂ ಯೋಚಿಸಲು ಸಾಧ್ಯವಿಲ್ಲ.

ಈ ದಾಳಿಗೆ ಸಂಚು ರೂಪಿಸಿದವರಿಗೆ ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದಕರ ಬೆನ್ನು ಮುರಿಯುವುದಂತೂ ಖಂಡಿತ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....