ದೇಶದ ಎಲ್ಲಾ ರಾಜ್ಯಗಳಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ

71

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಲು ಕೇಳಿಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚಿಸಲು ಕೇಳಿಕೊಳ್ಳುತ್ತಿದ್ದಾರೆ

. ಬಹುತೇಕ ಪ್ರವಾಸಿಗರು ಸೇರಿದಂತೆ 26 ಮಂದಿಯನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಕಾರಣ, ಇದೇ ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಭಾರತ ಘೋಷಿಸಿತ್ತು.

ಅದರ ಜೊತೆಗೆ ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗನೆ ತವರುದೇಶಕ್ಕೆ ಮರಳುವಂತೆ ಸಲಹೆ ನೀಡಲಾಗಿದೆ

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಪಹಲ್ಗಾಮ್‌ನಲ್ಲಿ ಹೆಚ್ಚಾಗಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಿರಾಯುಧ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿದ್ದಾರೆ.

ಭಾರತ ಸರ್ಕಾರ ಈ ಬಗ್ಗೆ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಲ್ಪಾವಧಿಯ ವೀಸಾ ಹೊಂದಿರುವವರ ವೀಸಾಗಳನ್ನು ರದ್ದುಗೊಳಿಸಬೇಕೆಂದು ನಮಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

“ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ...

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...