ಮಹಾರಾಷ್ಟ್ರ 111 ಪಾಕ್ ಪ್ರಜೆಗಳಿಗೆ ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

73

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ. ಆದರೆ ವೈದ್ಯಕೀಯ ವೀಸಾಗಳು ಹೆಚ್ಚುವರಿಯಾಗಿ ಎರಡು ದಿನಗಳವರೆಗೆ ಮಾನ್ಯವಾಗಿರುತ್ತವೆ.

ವೀಸಾ ನೀಡುವ ಕೇಂದ್ರಗಳು ಮತ್ತು ಪಾಸ್‌ಪೋರ್ಟ್ ಕಚೇರಿಯಿಂದ ಪಾಕಿಸ್ತಾನಿ ಪ್ರಜೆಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಸುದ್ದಿಗಾರರಿಗೆ ತಿಳಿಸಿದರು.

“ಇದುವರೆಗೆ 111 ಪಾಕಿಸ್ತಾನಿ ಪ್ರಜೆಗಳ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರೆಲ್ಲರೂ ನಿಗದಿತ ಗಡುವಿನೊಳಗೆ ದೇಶ ತೊರೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಪ್ರವಾಸೋದ್ಯಮ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ವೀಸಾಗಳನ್ನು ನೀಡಲಾಗಿದ್ದು, ‘ವೈದ್ಯಕೀಯ ಕಾರಣಕ್ಕಾಗಿ ಇಲ್ಲಿರುವವರು ಏಪ್ರಿಲ್ 29 ರೊಳಗೆ ಹೊರಡಲು ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

‘ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ’: ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸೂಚನೆ ಈ ಮಧ್ಯೆ ಛತ್ರಪತಿ ಸಂಭಾಜಿನಗರದ ಪೊಲೀಸರು 57 ಪಾಕಿಸ್ತಾನಿ ಪ್ರಜೆಗಳು ದೀರ್ಘಾವಧಿಯ ವೀಸಾದಲ್ಲಿ ನಗರದಲ್ಲಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ಸೂಚನೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಾಯುತ್ತಿರುವುದಾಗಿ ಜಿಲ್ಲಾ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...