ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ಹಾಗೂ ಜನಿವಾರ ತೆಗೆಸಿದಂತೆ ಸೂಚಿಸಲಾಗಿದೆ:: ಕೇಂದ್ರರೈಲ್ವೆ ರಾಜ್ಯ ಸಚಿವ ಸೋಮಣ್ಣ

53

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.


ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಾದ ಭುಗಿಲೇಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಸಚಿವ ಸೋಮಣ್ಣ ಅವರ ಗಮನಕ್ಕೆ ತಂದಿದ್ದರು.

ಇದರ ಬೆನ್ನಲ್ಲೇ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಸೋಮಣ್ಣ ಅವರ ಸೂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬ್ರಿಜೇಶ್ ಚೌಟ ಅವರು, ‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು.

ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ.

ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು.

ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಹೇಳಿದ್ದಾರೆ. ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...