ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪಿನ ಯುವಕರಿಂದ ಹಲ್ಲೆ ಯುವಕ ಬಲಿ, 15 ಜನರ ಬಂಧನ 10 ಜನ ಆರೋಪಿಗಳಿಗಾಗಿ ಶೋಧ

1

ಮಂಗಳೂರು ನಗರದ ಹೊರವಲಯದಲ್ಲಿರುವ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ನಡೆದಿದ್ದು, 25ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನನ್ನು ಥಳಿಸಿ ಕೊಲೆ ಮಾಡಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 27 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ, ಆತನ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದರು.

“ದೇವಾಲಯದ ಮೈದಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಆರಂಭದಲ್ಲಿ, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಏಪ್ರಿಲ್ 28 ರಂದು ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಯುವಕನ ಬೆನ್ನಿನ ಮೇಲೆ ಬಲವಾದ ಹೊಡೆತದ ಗಾಯಗಳಾಗಿದ್ದು, ರಕ್ತಸ್ರಾವ, ಆಘಾತ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಯುವಕ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ” ಎಂದರು

ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪಿನಿಂದ ನಡೆದ ಕೊಲೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ, 2023ರ ಸೆಕ್ಷನ್ 103(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣ ಸಂಬಂಧ ಇಲ್ಲಿಯವರೆಗೆ, 15 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಕನಿಷ್ಠ ಇನ್ನೂ 10 ಜನರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು. “ಕುಡುಪು ನಿವಾಸಿ ಸಚಿನ್ ಎಂದು ಗುರುತಿಸಲಾದ ಪ್ರಮುಖ ಆರೋಪಿ ಈಗಾಗಲೇ ನಮ್ಮ ವಶದಲ್ಲಿದ್ದಾನೆ.

ಈ ಪ್ರಕರಣದಲ್ಲಿ ಅನ್ವಯಿಸಲಾದ ಸೆಕ್ಷನ್ ತುಂಬಾ ಕಠಿಣವಾಗಿದೆ – ಸಾಬೀತಾದರೆ, ಆರೋಪಿಗಳು ವೈಯಕ್ತಿಕವಾಗಿ ಅಥವಾ ಗುಂಪಾಗಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯನ್ನು ಎದುರಿಸಬಹುದು.

ಅಪರಾಧದಲ್ಲಿ ಐದಕ್ಕೂ ಹೆಚ್ಚು ಜನರು ಭಾಗಿಯಾಗಿರುವುದರಿಂದ ನಾವು ಬಿಎನ್‌ಎಸ್ ಅಡಿಯಲ್ಲಿ ಈ ಸೆಕ್ಷನ್ ಅನ್ನು ಅನ್ವಯಿಸಿದ್ದೇವೆ” ಎಂದು ಅಗರ್‌ವಾಲ್ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...