ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ 93 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ

59

” ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು.

ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಈ ಬಗ್ಗೆ ಲಾಯರ್‌ ಜಗದೀಶ್‌ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ.

ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್‌, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡಲ್‌ನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೆಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು … ಇವೆಲ್ಲವೂ ನನ್ನ ಹೋರಾಟದ ಭಾಗ.

ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳೀಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವದಿಲ್ಲಎಂದು ಹೇಳಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...