ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವಿತರಣೆ

1

“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವನ್ನು ನೀಡಿದೆ.

ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಗಳನ್ನೂ ಕೂಡ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ

. ಇಂದು ಬಿಬಿಎಂಪಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದಾರೆ ಅಂತ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪೌರಕಾರ್ಮಿಕರು ದೂರು ನೀಡಿದ್ದರು.

ಮಿನಿಮಮ್ ವೇಜಸ್ ಆ್ಯಕ್ಟ್ ಅಡಿ ಕನಿಷ್ಠ ವೇತನ ಕೊಡಿಸುವ ಕೆಲಸ ಮಾಡಿದೆ. ಮಧ್ಯವರ್ತಿಗಳ ಹಾವಳಿಯಿಂದ ನೀವು ಇವತ್ತು ಮುಕ್ತರಾಗಿದ್ದೀರಿ ಎಂದರು.

ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು ಈಗ 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು


. ಈ ರೀತಿ ಪೌರಕಾರ್ಮಿಕರನ್ನು ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದು ಸಿಎಂ ತಿಳಿಸಿದರು.

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ.

ಇದರಿಂದ 4ನೇ ದರ್ಜೆಯ ಪೌರಕಾರ್ಮಿಕರ ವೇತನ, ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನೀವೆಲ್ಲ ಶುಚಿತ್ವ ಕಾಪಾಡುವರು. ಶುಚಿತ್ವದಲ್ಲೇ ದೈವತ್ವ ಕಾಣುತ್ತೇವೆ. ಅಂತಾ ಮಹಾತ್ಮ ಗಾಂಧೀಜಿ ಹೇಳಿದ್ದಾರೆ.

ಶುಚಿತ್ವ ಮಾಡುವ ಕೆಲಸ ಬಹಳ ಶ್ರೇಷ್ಠವಾದದ್ದು. ಬಸವಣ್ಣ ಅವರು ಕಾಯಕವೇ ಕೈಲಾಸ ಅಂದಿದ್ದರು. ಯಾವ ಕೆಲಸವೂ ಕೀಳಲ್ಲ, ಯಾವ ಕೆಲಸವೂ ಮೇಲಲ್ಲ ಎಂದರು.

ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ತಮ್ಮ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರಮುಖ ಭರವಸೆಯನ್ನು ಈಡೇರಿಸಿದೆ.

ನಾವು ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಸರ್ಕಾರಿ ನೌಕರರನ್ನಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದೆವು ಮತ್ತು ಇಂದು ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ ಎಂದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಭಾಗವಹಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌...

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್...