ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ 8 ಆರೋಪಿಗಳ ಬಂಧನ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲಿ ಕೋಮು ವಿರೋಧಿ ಪಡೆ ರಚನೆ:: ಗೃಹ ಸಚಿವ ಪರಮೇಶ್ವರ್

3

“ಹಿಂದುತ್ವವಾದಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ.


ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು ರಚಿಸುತ್ತಿದ್ದೇವೆ.

ಈ ಕಾರ್ಯಪಡೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದೆ. ಕೋಮುವಾದವನ್ನು ಬೆಂಬಲಿಸುವ ಅಥವಾ ಉತ್ತೇಜಿಸುವವರ ವಿರುದ್ಧ ಕೋಮು ವಿರೋಧಿ ಕಾರ್ಯಪಡೆ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದರು.


ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 5 ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಸದ್ಯ ಬಲೆಗೆ 8 ಮಂದಿ ಶಂಕಿತ ಆರೋಪಿಗಳು ಬಿದ್ದಿದ್ದಾರೆ. ಬಂಧಿತ 8 ಮಂದಿಯನ್ನು ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಎಂದು ಗುರುತಿಸಲಾಗಿದೆ ಎಂದರು.

ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ. ಗುಂಪು ಹಲ್ಲೆ ಮತ್ತು ಸುಹಾಸ್ ಹತ್ಯೆ ಪ್ರಕರಣ ಎರಡೂ ಘಟನೆಗಳು ಕೋಮು ಸಾಮರಸ್ಯಕ್ಕೆ ಸವಾಲೊಡ್ಡುತ್ತವೆ. ನಾವು ಯಾವುದೇ ರೀತಿಯ ಕೋಮು ಶಕ್ತಿಗಳನ್ನು ಸಹಿಸುವುದಿಲ್ಲ.

ನಮ್ಮ ಸರ್ಕಾರ ಈ ಪ್ರದೇಶದಲ್ಲಿ ಶಾಂತಿ ಕಾಪಾಡಲು ಬದ್ಧವಾಗಿದೆ. ಈ ಘಟನೆಗಳ ಬಗ್ಗೆ ನಾವು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದೇವೆ. ನಕ್ಸಲ್ ವಿರೋಧಿ ಪಡೆಯಂತೆಯೇ ನಾವು ಕೋಮು ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸುತ್ತೇವೆ


. ಇದು ಕೋಮು ಚಟುವಟಿಕೆಗಳನ್ನು ಮತ್ತು ಅವುಗಳನ್ನು ಬೆಂಬಲಿಸುವವರನ್ನು ಎದುರಿಸಲು ಸಮಗ್ರ ಅಧಿಕಾರವನ್ನು ಹೊಂದಿರುವ ಪ್ರತ್ಯೇಕ ವಿಭಾಗವಾಗಿರುತ್ತದೆ.

ಪ್ರಚೋದನಕಾರಿ ಭಾಷಣಗಳು ಅಥವಾ ಹೇಳಿಕೆಗಳನ್ನು ನೀಡುವ ಯಾರಾದರೂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು


. ಕೋಮು ವಿರೋಧಿ ಕಾರ್ಯಪಡೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಯಾವುದೇ ಕೋಮು ಭಾಷಣಗಳು, ದ್ವೇಷ ಭಾಷಣಗಳು ನಡೆದರೆ.

ಕೋಮು ವಿರೋಧಿ ಶಕ್ತಿಗಳು ಕ್ರಮ ಕೈಗೊಂಡು ಕಠಿಣ ಕ್ರಮ ಕೈಗೊಳ್ಳಲು ಕೋಮು ವಿರೋಧಿ ಕಾರ್ಯಪಡೆ ರಚಿಸಲಾಗುವುದು ಎಂದರು


. ಶೀಘ್ರದಲ್ಲೇ ರಚನೆಯಾಗಲಿರುವ ಕೋಮು ವಿರೋಧಿ ಕಾರ್ಯಪಡೆ ಹಿಂದಿನ ಕೋಮು ಗಲಭೆಗಳ ತನಿಖೆ ನಡೆಸುತ್ತದೆ. ಮುಂದೆ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ

. ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ,ಅವರು ರಾಜಕೀಯ ನಾಯಕರಾಗಿದ್ದರೂ ಸಹ, ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಸಫ್ಘಾನ್ ಮೇಲೆ 2023 ರಲ್ಲಿ ಮಾರಣಾಂತಿಕ ಹಲ್ಲೆಯಾಗುತ್ತದೆ. ಸಫ್ಘಾನ್ ಗೆ ಸುಹಾಸ್ ತನ್ನನ್ನು ಕೊಲೆ ಮಾಡುವ ಆತಂಕ ಇತ್ತು. ಈ ಹಿನ್ನಲೆ ಸುಹಾಸ್ ನನ್ನು ಕೊಲೆ ಮಾಡಲು ತೀರ್ಮಾನ ಮಾಡಿ ಫಾಜಿಲ್ ನ ತಮ್ಮ ಆದಿಲ್‌ನನ್ನು ಸಂಪರ್ಕಿಸಿ ಕೊಲೆ ಮಾಡೋಕೆ ತೀರ್ಮಾನ ಮಾಡುತ್ತಾರೆ.

ಸುಹಾಸ್‌ ಕೊಲೆಗೆ ಐದು ಲಕ್ಷ ರೂಪಾಯಿ ಆದಿಲ್ ಸಫ್ಘಾನ್ ತಂಡಕ್ಕೆ ನೀಡುತ್ತಾನೆ. ನಿಯಾಜ್ ನ ಇಬ್ಬರು ಸ್ನೇಹಿತರು ನಾಗಾರಾಜ್ ಮತ್ತು ರಂಜಿನ್ ನನ್ನು ಸಂಪರ್ಕ ಮಾಡುತ್ತಾರೆ.

ಈ ಇಬ್ಬರು ಸಫ್ಘಾನ್ ಮನೆಯಲ್ಲಿ ಎರಡು ದಿನಗಳಿಂದ ವಾಸ ಮಾಡುತ್ತಾರೆ. ಮೇ 1 ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ. ಕಾಂಟ್ರ್ಯಾಕ್ಟ್ ಕಿಲ್ಲಿಂಗ್ ಗೆ ಚಿಕ್ಕಮಗಳೂರಿನ ರಂಜಿತ್, ನಾಗರಾಜ್ ಅವರನ್ನು ನೇಮಕ ಮಾಡಲಾಗಿತ್ತು ಎಂದರು.

ಇನ್ನು ಬುರ್ಖಾಧಾರಿ ಮಹಿಳೆಯರು ನಿಯಾಜ್ ಸಂಬಂಧಿಗಳು ಎಂಬ ಮಾಹಿತಿ ಲಭ್ಯವಿದ್ದು, ಈ ಬಗ್ಗೆ ತನಿಖೆ ನಡೆಸುತ್ತೇವೆ


ಪ್ರಕರಣವನ್ನು ಖಂಡಿಸಿ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯನ್ನ ಬಂದ್ ಮಾಡಿದ್ದು ಉದ್ರಿಕ್ತರ ಗುಂಪು ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು.

ಪರಿಣಾಮ ಈ ಬೆನ್ನಲ್ಲೇ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನ ಏರ್ಪಡಿಸಲಾಗಿತ್ತು. ಅಲ್ಲದೇ ಮಂಗಳೂರು ನಗರಾದ್ಯಂತ 144 ಸೆಕ್ಷನ್ ಜಾರಿಯಾಗಿದೆ.

ನಿನ್ನೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಗೃಹ ಸಚಿವರು ಮಂಗಳೂರಿನಲ್ಲಿ ಸಭೆ ನಡೆಸಿದ್ದು ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಎಡಿಜಿಪಿ ಹಿತೇಶ್, ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...