ಭಾರತ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ಡ್ಯಾಮ್ ನಿರ್ಮಿಸಿದರೆ ಇಸ್ಲಾಮಾಬಾದ್  “ಧ್ವಂಸಗೊಳಿಸಲಿದೆ :: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

73

“ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಾರತ – ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರ ನಡುವೆ, ಭಾರತ ಸಿಂಧೂ ಜಲ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ಡ್ಯಾಮ್ ನಿರ್ಮಿಸಿದರೆ ಇಸ್ಲಾಮಾಬಾದ್ ಅದನ್ನು “ಧ್ವಂಸಗೊಳಿಸಲಿದೆ” ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಶುಕ್ರವಾರ ಹೇಳಿದ್ದಾರೆ.

ಜಿಯೋ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಸಿಫ್, ಸಿಂಧೂ ನದಿಗೆ ಅಡ್ಡವಾಗಿ ಯಾವುದೇ ಮೂಲಸೌಕರ್ಯ ನಿರ್ಮಿಸುವುದನ್ನು “ಭಾರತದ ಆಕ್ರಮಣ” ಎಂದು ಪರಿಗಣಿಸಲಾಗುತ್ತದೆ ಎಂದಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿ ಬಳಿಕ ಪಾಕಿಸ್ತಾನ ವಿರುದ್ಧ ಭಾರತ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದು, ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.

ಸಿಂಧೂ ನದಿಗೆ ಅಡ್ಡವಾಗಿ ಡ್ಯಾಂ ನಿರ್ಮಿಸಲು ಭಾರತ ಯತ್ನಿಸಿದರೆ ಬಲವಾದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಆಸಿಫ್ ಒತ್ತಿ ಹೇಳಿದ್ದಾರೆ. “ಖಂಡಿತ, ಅವರು ಯಾವುದೇ ರಚನೆಯನ್ನು ನಿರ್ಮಿಸಲು ಪ್ರಯತ್ನಿಸಿದರೆ, ನಾವು ಅದನ್ನು ಧ್ವಂಸಗೊಳಿಸುತ್ತೇವೆ

. ಆಕ್ರಮಣವು ಕೇವಲ ಫಿರಂಗಿ ಅಥವಾ ಗುಂಡುಗಳನ್ನು ಹಾರಿಸುವುದರ ಮೂಲಕ ಅಲ್ಲ; ಅದಕ್ಕೆ ಹಲವು ಮುಖಗಳಿವೆ. ಆ ಮುಖಗಳಲ್ಲಿ ಸಿಂಧೂ ನದಿ ನೀರನ್ನು ತಡೆಯುವುದು ಅಥವಾ ತಿರುಗಿಸುವುದು ಒಂದು.

ಇದರಿಂದ ಪಾಕಿಸ್ತಾನದಲ್ಲಿ ಹಸಿವು ಮತ್ತು ಬಾಯಾರಿಕೆಯಿಂದ ಜನರ ಸಾವುಗಳಿಗೆ ಕಾರಣವಾಗಬಹುದು” ಎಂದಿದ್ದಾರೆ. ಆದಾಗ್ಯೂ, ಸದ್ಯಕ್ಕೆ ಪಾಕಿಸ್ತಾನವು ಸೂಕ್ತ ವೇದಿಕೆಗಳಲ್ಲಿ ಮತ್ತು ಸಂಬಂಧಿತ ಪಾಲುದಾರರೊಂದಿಗೆ ಸಿಂಧೂ ನದಿ ಒಪ್ಪಂದದ ವಿಷಯವನ್ನು ಪ್ರಸ್ತಾಪಿಸುತ್ತದೆ ಎಂದು ಆಸಿಫ್ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಭಾರತ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಉದ್ಧಟತನ

“ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದದ ವಿವಾದದ ನಡುವೆ ಭಾರತಕ್ಕೆ ಪಾಕಿಸ್ತಾನ ಮತ್ತೊಮ್ಮೆ ಯುದ್ಧದ ಬೆದರಿಕೆ ಹಾಕಿದೆ....

ತನ್ನ ಪ್ರದೇಶಗಳಿಗೆ ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಹಿಂದೂ ಹೆಸರು ಮರುನಾಮಕರಣ, ಬದಲಾಗುತ್ತಿದೇಯಾ ಪಾಕಿಸ್ತಾನ??

ಲಾಹೋರ್: ಭಾರತದ ಪ್ರಧಾನಿ ಮೋದಿ ಅಖಂಡ ಭಾರತದ ಕುರಿತು ಮಾಡಿದ್ದ ಭಾಷಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲಿ...

ದೇಶ ರಕ್ಷಣೆಗೆ 92 ಶತಕೋಟಿ ಡಾಲರ್ ಬಜೆಟ್ ವಿಶ್ವದ 5ನೇ ರಾಷ್ಟ್ರವಾಗಿ ಎಲೈಟ್ ಗ್ರೂಪ್ ಸೇರಿದ ಭಾರತ!

ನವದೆಹಲಿ: ರಕ್ಷಣಾ ವಿಭಾಗದಲ್ಲಿ ಭಾರತ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ದೇಶದ ರಕ್ಷಣಾ ಬಜೆಟ್ 92 ಶತಕೋಟಿ...

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್,

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ....