ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ಬೆಂಗಳೂರು: ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಆಪ್ತರಿಂದ ಪೊಲೀಸ್ ದೂರು ದಾಖಲು

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವ್ಯವಸ್ಥಾಪಕ ನಾಗರಾಜ್ ಅವರು ನಟ ಧನ್ವೀರ್ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಧನ್ವೀರ್ ವಿರುದ್ಧ ವಂಚನೆ ಪ್ರಕರಣ ಹಾಗೂ ಧನ್ವೀರ್ ತಂದೆ ವಿಜಯಲಕ್ಷ್ಮಿ...

· ಬೆಂಗಳೂರು ನಗರ
ನಟ ದರ್ಶನ್ ಕುಟುಂಬ - ಧನ್ವೀರ್ ನಡುವೆ ಬಿರುಕು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ, ಪೊಲೀಸ್ ವಿಚಾರಣೆಗೆ ಸಿದ್ಧತೆ!
ಹಂಚಿಕೊಳ್ಳಿ:

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ವ್ಯವಸ್ಥಾಪಕ ನಾಗರಾಜ್ ಅವರು ನಟ ಧನ್ವೀರ್ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೋನ್ ಕರೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೌತಮ್ ಎಂಬುವವರು 5 ಲಕ್ಷ ರೂಪಾಯಿ ವಂಚನೆ ಆರೋಪದ ಮೇಲೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಧನ್ವೀರ್ ವಿರುದ್ಧ ದೂರು ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ವಿಜಯಲಕ್ಷ್ಮಿ ಹಾಗೂ ಅವರ ತಂಡದ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಂಚಿಕೊಳ್ಳಿ: