ಬಿಗ್ ಬಾಸ್ ಖ್ಯಾತಿಯ ನಟ ರಾಕೇಶ್ ಅಡಿಗ ಮತ್ತು ಮಾಧುರಿ ಸಿಂಗ್ ನಿಶ್ಚಿತಾರ್ಥ
ಬಿಗ್ ಬಾಸ್ ಖ್ಯಾತಿಯ ನಟ ರಾಕೇಶ್ ಅಡಿಗ ಮತ್ತು ಮಾಧುರಿ ಸಿಂಗ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಇವರ ಎಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ ನಟ ರಾಕೇಶ್ ಅಡಿಗ ಅವರು ಮಾಧುರಿ ಸಿಂಗ್ ಎಂಬುವವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭದಲ್ಲಿ ಕಪ್ಪು ಬಣ್ಣದ ಶೆರ್ವಾನಿ ಧರಿಸಿದ್ದ ರಾಕೇಶ್ ಅಡಿಗ, ಕ್ರೀಮ್ ಬಣ್ಣದ ಲೆಹೆಂಗಾ ತೊಟ್ಟಿದ್ದ ಮಾಧುರಿ ಸಿಂಗ್ ಅವರಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾರೆ. ಜೋಶ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ರಾಕೇಶ್ ಅಡಿಗ, ಇದೀಗ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ.




