ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ಚೆನ್ನೈನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಿಯಾ ಭವಾನಿ ಶಂಕರ್

ಚೆನ್ನೈ: ದಕ್ಷಿಣ ಭಾರತದ ಮತ್ತೋರ್ವ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನಟಿ ಪ್ರಿಯಾ ಭವಾನಿ ಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ.ಚಿತ್ರರಂಗದಲ್ಲಿ ಮದುವೆ ಸಂಭ್ರಮ ಶುರುವಾಗಿ...

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ Irumudi ನಟಿ ಪ್ರಿಯಾ ಭವಾನಿ, ಹುಡುಗ ಯಾರು? ಫೋಟೋಗಳು ವೈರಲ್!
ಹಂಚಿಕೊಳ್ಳಿ:

ಇರುಮುಡಿ ಚಿತ್ರದ ನಟಿ ಪ್ರಿಯಾ ಭವಾನಿ ಶಂಕರ್ ಅವರು ತಮ್ಮ ಬಹುಕಾಲದ ಗೆಳೆಯ ರಾಜ್ ವೇಲು ಅವರೊಂದಿಗೆ ಚೆನ್ನೈನಲ್ಲಿ ವಿವಾಹವಾಗಿದ್ದಾರೆ. ಈ ಜೋಡಿ ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದು, ಬುಧವಾರ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಸಮಾರಂಭವನ್ನು ಆಯೋಜಿಸಿದ್ದರು. ಮದುವೆಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಸುದ್ದಿ ನಿರೂಪಕಿಯಾಗಿ ವೃತ್ತಿಜೀವನ ಆರಂಭಿಸಿದ್ದ ಪ್ರಿಯಾ, ನಂತರ ಚಿತ್ರರಂಗದಲ್ಲಿ ಸಕ್ರಿಯರಾಗಿ ಹಲವು ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಹಂಚಿಕೊಳ್ಳಿ: