ದೆಹಲಿ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣದಲ್ಲಿ ನಟಿ ನೋರಾ ಫತೇಹಿಗೆ ನ್ಯಾಯಾಲಯದ ಸಮನ್ಸ್
ನವದೆಹಲಿ: ಈ ಹಿಂದೆ ಕೆಡಿ ಚಿತ್ರದ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬಾಲಿವುಡ್ ನಟಿ ನೋರಾ ಫತೇಹಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.ಬಹುಕೋಟಿ ಸುಲಿಗೆ...

ಕುಖ್ಯಾತ ವಂಚಕ ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ ಬಹುಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿಗೆ ದೆಹಲಿ ನ್ಯಾಯಾಲಯ ಸಮನ್ಸ್ ನೀಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಗಗನ್‌ದೀಪ್ ಸಿಂಗ್ ಅವರು ನವೆಂಬರ್ 2ರಂದು ಸಾಕ್ಷಿಯಾಗಿ ಹಾಜರಾಗುವಂತೆ ನಟಿಗೆ ನಿರ್ದೇಶನ ನೀಡಿದ್ದಾರೆ. ಪ್ರಕರಣದ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ನೋರಾ ಫತೇಹಿ ಅವರನ್ನು ಮೂರನೇ ಸಾಕ್ಷಿಯಾಗಿ ಹೆಸರಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ನ್ಯಾಯಾಲಯದ ಆದೇಶದಂತೆ ನಟಿ ವಿಚಾರಣೆಗೆ ಹಾಜರಾಗಬೇಕಿದೆ.




