ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ಹೈದರಾಬಾದ್‌ನಲ್ಲಿ ರಾಮಾಯಣ ಚಿತ್ರದ ವಿಎಫ್‌ಎಕ್ಸ್ ಬಗ್ಗೆ ನಟ ಯಶ್ ಹೇಳಿದ್ದೇನು

ನವೆಂಬರ್ 5ರಂದು ಬಿಡುಗಡೆಯಾಗಲಿರುವ 'ರಾಮಾಯಣ: ಭಾಗ 1' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ನಟ ಯಶ್ ಪ್ರೇಕ್ಷಕರಿಗೆ ವಿಶೇಷ ಮನವಿ ಮಾಡಿದ್ದಾರೆ. ವಿಎಫ್‌ಎಕ್ಸ್‌ನಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಹುಡುಕದೆ, ಮುಕ್ತ ಮನಸ್ಸಿನ...

'ವಿಎಫ್‌ಎಕ್ಸ್‌ನಲ್ಲಿ ಸಣ್ಣ ಸಣ್ಣ ತಪ್ಪು ಹುಡುಕುವುದನ್ನು ನಿಲ್ಲಿಸಿ..' ಯಶ್ ಗುಡುಗು
ಹಂಚಿಕೊಳ್ಳಿ:

ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಭಾಗ 1 ನವೆಂಬರ್ 5 ರಂದು ಬಿಡುಗಡೆಯಾಗಲಿದೆ. ಹೈದರಾಬಾದ್‌ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಯಶ್, ಚಿತ್ರದ ವಿಎಫ್‌ಎಕ್ಸ್ ತಂತ್ರಜ್ಞಾನದಲ್ಲಿ ಸಣ್ಣಪುಟ್ಟ ಲೋಪಗಳನ್ನು ಹುಡುಕುವುದನ್ನು ನಿಲ್ಲಿಸುವಂತೆ ಪ್ರೇಕ್ಷಕರಲ್ಲಿ ಮನವಿ ಮಾಡಿದರು. ನಮಿತ್ ಮಲ್ಹೋತ್ರಾ ಅವರ ಪ್ರಯತ್ನವನ್ನು ಶ್ಲಾಘಿಸಿದ ಅವರು, ಇಂತಹ ಅವಕಾಶಗಳು ಮತ್ತೆ ಸಿಗುವುದಿಲ್ಲ ಎಂದು ತಿಳಿಸಿದರು. ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿರುವ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಯಶ್ ರಾವಣನ ಪಾತ್ರ ನಿರ್ವಹಿಸುವುದರ ಜೊತೆಗೆ ಸಹ ನಿರ್ಮಾಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಹಂಚಿಕೊಳ್ಳಿ: