ಹೈದರಾಬಾದ್: ಪತ್ನಿಯ ಶಸ್ತ್ರಚಿಕಿತ್ಸೆ ವೇಳೆ ಭಾವುಕರಾಗಿ ಕಣ್ಣೀರಿಟ್ಟ ತೆಲುಗು ನಟ ಅಲಿ
ಹೈದರಾಬಾದ್: ಖ್ಯಾತ ತೆಲುಗು ಹಾಸ್ಯ ನಟ ಅಲಿ ಬಿಕ್ಕಿ ಬಿಕ್ಕಿ ಅತ್ತ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದ್ದು, ಅವರ ಪತ್ನಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಇದಕ್ಕೆ ಕಾರಣ ಎನ್ನಲಾ...

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲಿ ಅವರ ಪತ್ನಿ ಜುಬೇದಾ ಸುಲ್ತಾನಾ ಬೇಗಂ ಇತ್ತೀಚೆಗೆ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಪತ್ನಿಯ ನೋವನ್ನು ಕಂಡು ಅಲಿ ಭಾವುಕರಾಗಿ ಅತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಠಿಣ ಪರಿಸ್ಥಿತಿಯಲ್ಲಿ ಪತಿ ನೀಡಿದ ಬೆಂಬಲ ಮತ್ತು ಪ್ರೀತಿಯನ್ನು ಜುಬೇದಾ ಸಾಮಾಜಿಕ ಮಾಧ್ಯಮಗಳ ಮೂಲಕ ಸ್ಮರಿಸಿಕೊಂಡಿದ್ದಾರೆ.




