ಕಿಚ್ಚ ಸುದೀಪ್ಗೆ ಸವಾಲೆಸೆದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ; ಕ್ಷಮೆಯಾಚಿಸುವಂತೆ ಮಾಜಿ ಸಚಿವ ರಾಜುಗೌಡ ಆಗ್ರಹ!
ಚಿತ್ರದುರ್ಗದಲ್ಲಿ ನಡೆದ ಮದಕರಿ ನಾಯಕ ಜಯಂತಿಯಲ್ಲಿ ನಟ ಕಿಚ್ಚ ಸುದೀಪ್ ವಿರುದ್ಧ ವಿ.ಎಸ್. ಉಗ್ರಪ್ಪ ನೀಡಿದ್ದ ವಿವಾದಾತ್ಮಕ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಗ್ರಪ್ಪ ಅವರ ಈ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಚಿ...

ನಟ ಕಿಚ್ಚ ಸುದೀಪ್ ಅವರ ಕುರಿತು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೀಡಿರುವ ಹೇಳಿಕೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಸ್ಜಿ ರಾಜುಗೌಡ, ಕಲಾವಿದರನ್ನು ಏಕವಚನದಲ್ಲಿ ನಿಂದಿಸುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಸುದೀಪ್ ಅವರು ಸ್ವಯಂ ಪರಿಶ್ರಮದಿಂದ ಬೆಳೆದ ಕಲಾವಿದರಾಗಿದ್ದು, ಕೂಡಲೇ ವಿ.ಎಸ್. ಉಗ್ರಪ್ಪ ಅವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ. ಚಿತ್ರದುರ್ಗದ ಕಾರ್ಯಕ್ರಮವೊಂದರಲ್ಲಿ ವಿ.ಎಸ್. ಉಗ್ರಪ್ಪ ಅವರು ಕಿಚ್ಚ ಸುದೀಪ್ ಅವರಿಗೆ ಸವಾಲು ಹಾಕಿದ್ದರಿಂದ ಈ ವಿವಾದ ಭುಗಿಲೆದ್ದಿದೆ.




