ಮೈಸೂರಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 729 ಕೋಟಿ ವೆಚ್ಚದಲ್ಲಿ ಫಿಲ್ಮ್ ಸಿಟಿ ನಿರ್ಮಾಣ
ಸುಮಾರು 10 ವರ್ಷಗಳಿಂದ ಕೇವಲ ಕಾಗದದಲ್ಲೇ ಉಳಿದಿದ್ದ ಮೈಸೂರಿನ 'ಅಂತಾರಾಷ್ಟ್ರೀಯ ಚಲನಚಿತ್ರ ನಗರಿ' ನಿರ್ಮಾಣಕ್ಕೆ ಸಚಿವ ಸಂಪುಟ ಕೊನೆಗೂ ಅನುಮೋದನೆ ನೀಡಿದೆ. ನಂಜನಗೂಡು ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 729.4...

ಸುಮಾರು ಒಂದು ದಶಕದಿಂದ ನನೆಗುದಿಗೆ ಬಿದ್ದಿದ್ದ ಅಂತಾರಾಷ್ಟ್ರೀಯ ಚಲನಚಿತ್ರ ನಗರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಅಧಿಕೃತ ಅನುಮೋದನೆ ನೀಡಿದೆ. ಮೈಸೂರಿನ ನಂಜನಗೂಡು ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ 160.8 ಎಕರೆ ಜಾಗದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಈ ಫಿಲ್ಮ್ ಸಿಟಿ ತಲೆ ಎತ್ತಲಿದೆ. 729.43 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕೇಂದ್ರದಲ್ಲಿ ಮಲ್ಟಿಪ್ಲೆಕ್ಸ್, ಚಿತ್ರೀಕರಣದ ಸೌಲಭ್ಯಗಳು, ಫಿಲ್ಮ್ ಸ್ಕೂಲ್ ಹಾಗೂ ಮ್ಯೂಸಿಯಂ ಸೇರಿದಂತೆ ಹಲವು ಆಧುನಿಕ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ಮೈಸೂರು ವಿಮಾನ ನಿಲ್ದಾಣಕ್ಕೆ ಹತ್ತಿರವಿರುವ ಈ ಸ್ಥಳವು ಪ್ರವಾಸಿಗರನ್ನು ಆಕರ್ಷಿಸಲು ಮತ್ತು ಚಿತ್ರೋದ್ಯಮದ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




