ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸಿನಿಮಾ

ಮುಂಬೈನ ಜುಹೂನಲ್ಲಿ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ

ಟೈಗರ್ ಶ್ರಾಫ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಭದ್ರತೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎನ್ನಲಾದ ಬಿಷ್ಣೋಯ್ ಗ್ಯಾಂಗ್‌ನ ಆಡಿಯೋ...

TIGER SHROFF: ಗುಂಡಿನ ದಾಳಿ ಬಳಿಕ ಟೈಗರ್‌ ಶ್ರಾಫ್‌ ಹೇಗಿದ್ದಾರೆ? ಅವ್ರ ಬಂಗ್ಲೆಯಲ್ಲಿ ಪರಿಸ್ಥಿತಿ ಹೇಗಿದೆ?
ಹಂಚಿಕೊಳ್ಳಿ:

ಮುಂಬೈನ ಜುಹೂನ ಪುಷ್ಪಾ ಪಾರ್ಕ್ ಬಳಿ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಕಾರಿನ ಗಾಜಿನ ಚೂರುಗಳು ಮತ್ತು ಗನ್‌ಪೌಡರ್‌ನಿಂದ ನಟನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ದೇಹದ ಹಲವೆಡೆ ಬ್ಯಾಂಡೇಜ್ ಹಾಕಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ಬಳಿಕ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಟನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸುವಂತೆ ಶಿಂಧೆ ಸೂಚನೆ ನೀಡಿದ್ದು, ಸೆಲೆಬ್ರಿಟಿಗಳ ಭದ್ರತೆಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಹಂಚಿಕೊಳ್ಳಿ: