ನಟ ಸುದೀಪ್ ಮತ್ತು ಪ್ರಿಯಾ ದಂಪತಿಯ 25ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ
ಸ್ಯಾಂಡಲ್‌ವುಡ್ ಖ್ಯಾತ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪ್ರಿಯಾ ಅವರ ದಾಂಪತ್ಯಕ್ಕೆ 25 ವರ್ಷ ತುಂಬಿದ್ದು, ದಂಪತಿ ಭಾನುವಾರ ತಮ್ಮ 25ನೇ ವಿವಾಹ ವಾರ್ಷಿಕೋತ್ಸವವನ್ನು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ...

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮತ್ತು ಪ್ರಿಯಾ ಅವರು ತಮ್ಮ ದಾಂಪತ್ಯ ಜೀವನದ 25ನೇ ವರ್ಷದ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ. 2001ರ ಅಕ್ಟೋಬರ್ 18ರಂದು ವಿವಾಹವಾಗಿದ್ದ ಈ ಜೋಡಿ, ಭಾನುವಾರ ತಮ್ಮ ಮನೆಯಲ್ಲಿ ಆಪ್ತರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದಂಪತಿ ಹಾರ ಬದಲಾಯಿಸಿಕೊಂಡು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. 25 ವರ್ಷಗಳ ಸುದೀರ್ಘ ವೈವಾಹಿಕ ಜೀವನದ ಬೆಳ್ಳಿ ಹಬ್ಬವನ್ನು ಈ ಜೋಡಿ ಅದ್ಧೂರಿಯಾಗಿ ಆಚರಿಸಿದೆ.




