ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನ ಮೇಲೆ ಚೂರಿಯಿಂದ ಹಲ್ಲೆ
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ಆರೋಪಿಗಳು ಹಲ್ಲೆ ನಡೆಸಿರುವ ಕುರಿತು ಗಣೇಶ್ ಎಂಬವರು ದೂರು ನೀಡಿದ್ದಾರೆ. ದೂರಿನ ಪ್ರಕಾರ, ದಿನಾಂಕ 18.10.2026 ರಂದು ರಾತ್...

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ಆರೋಪಿಗಳು ಹಲ್ಲೆ ನಡೆಸಿರುವ ಕುರಿತು ಗಣೇಶ್ ಎಂಬವರು ದೂರು ನೀಡಿದ್ದಾರೆ.
ದೂರಿನ ಪ್ರಕಾರ, ದಿನಾಂಕ 18.10.2026 ರಂದು ರಾತ್ರಿ ವೇಳೆ ಗಣೇಶ್ ತನ್ನ ಸಹೋದರ ಪ್ರಕಾಶ್ ಹಾಗೂ ಐವರು ಸ್ನೇಹಿತರೊಂದಿಗೆ ಸಿದ್ದಕಟ್ಟೆ ಜಂಕ್ಷನ್ನಲ್ಲಿ ನಿಂತಿದ್ದರು. ಈ ವೇಳೆ ಅಕ್ಷಿತ್, ಕಿರಣ್ ಅಲಿಯಾಸ್ ರಂಜು, ಅಜೀತ್, ಧನುಷ್, ಸಂತೋಷ್ ಹಾಗೂ ರಾಜು ಎಂಬವರು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಆಗಮಿಸಿದ್ದಾರೆ.
ಆರೋಪಿಗಳು ತಮ್ಮ ವಾಹನಗಳನ್ನು ಸ್ವಲ್ಪ ದೂರದಲ್ಲಿ ನಿಲ್ಲಿಸಿ ಪ್ರಕಾಶ್ ಅವರನ್ನು ಕರೆದಿದ್ದಾರೆ. ಪ್ರಕಾಶ್ ಅವರು ಆರೋಪಿಗಳಿದ್ದ ಸ್ಥಳಕ್ಕೆ ಹೋದಾಗ, ಅವರೆಲ್ಲರೂ ಸೇರಿ ಪ್ರಕಾಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆ ನಡೆಸಿದವರ ಪೈಕಿ ಅಕ್ಷಿತ್ ಎಂಬಾತನು ಚೂರಿಯಿಂದ ಪ್ರಕಾಶ್ ಅವರಿಗೆ ಹಲವು ಬಾರಿ ಚುಚ್ಚಿ ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗಾಯಗೊಂಡ ಪ್ರಕಾಶ್ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 141/2026, ಕಲಂ: 189(2), 191(2), 115(2), 118(1), 352, 351(2), 109 ಜೊತೆಗೆ 190 ಬಿ ಎನ್ ಎಸ್ 2023 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ


