ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಬೆಳಗಾವಿ: ಗೋಕಾಕ್ ಫಾಲ್ಸ್‌ನಲ್ಲಿ ಪ್ರೇಯಸಿಯ ಕತ್ತು ಹಿಸುಕಿ ಕೊಂದ ಸಶಸ್ತ್ರ ಪಡೆ ಪೇದೆ

ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‌ನಲ್ಲಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ರಕ್ಷಿತಾ ಸರಿಕರ್‌ಳನ್ನು ಮದುವೆ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪ್ರಿಯಕರ ಬಸಪ್ಪ ಸಾತಣ್ಣವರ ಕೊಲೆ ಮಾಡಿರುವ ಆರೋಪ ಕೇಳಿಬಂದಿ...

· ಬೆಳಗಾವಿ
ನಾಲ್ಕು ವರ್ಷಗಳ ಪ್ರೀತಿ ಕೊಲೆಯಲ್ಲಿ ಅಂತ್ಯ! ಗೋಕಾಕ್ ಫಾಲ್ಸ್‌ಗೆ ಕರೆತಂದು ಪ್ರೇಯಸಿಯನ್ನೇ ಕೊಂದ ಪೇದೆ
ಹಂಚಿಕೊಳ್ಳಿ:

ಬೆಳಗಾವಿಯ ಗೋಕಾಕ್ ಫಾಲ್ಸ್‌ನಲ್ಲಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಸಶಸ್ತ್ರ ಪಡೆ ಪೇದೆ ಬಸಪ್ಪ ಸಾತಣ್ಣವರ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಮದುವೆಯಾಗುವಂತೆ ರಕ್ಷಿತಾ ಸರಿಕರ್ ಒತ್ತಾಯಿಸಿದಾಗ ಇಬ್ಬರ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದ ಆರೋಪಿ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಮೃತದೇಹವನ್ನು ಗುಡ್ಡದಲ್ಲಿ ಎಸೆದು ಆರೋಪಿ ಪರಾರಿಯಾಗಿದ್ದನು. ರಕ್ಷಿತಾ ನಾಪತ್ತೆಯಾದ ಬಗ್ಗೆ ಸಂಬಂಧಿಕರು ದೂರು ನೀಡಿದ ನಂತರ, ಪೊಲೀಸರು ಆಕೆಯ ಕಾಲ್ ಹಿಸ್ಟರಿ ಪರಿಶೀಲಿಸಿ ಬಸಪ್ಪನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಹಂಚಿಕೊಳ್ಳಿ: