ಮುಖ್ಯ ವಿಷಯಕ್ಕೆ ಹೋಗಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಬೆಂಗಳೂರಿನ ಲಕ್ಷೀಪುರದಲ್ಲಿ ಮಕ್ಕಳಾಗಿಲ್ಲ ಎಂದು ನಿಂದಿಸಿದ ಪತಿಯನ್ನು ಕೊಂದ ಪತ್ನಿ

ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ಮಕ್ಕಳಾಗಿಲ್ಲ ಎಂದು ನಿತ್ಯ ಕುಡಿದು ಬಂದು ಹೀಯಾಳಿಸುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಪತ್ನಿಯೇ ಕೊಲೆ ಮಾಡಿದ್ದಾಳೆ. ತೀವ್ರ ರಕ್ತಸ್ರಾವದಿಂದ ಪತಿ ಸ್ಥಳದಲ್ಲೇ ಮೃತಪ...

· ಬೆಂಗಳೂರು ನಗರ
ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಂದ ಪತ್ನಿ
ಹಂಚಿಕೊಳ್ಳಿ:

ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷೀಪುರದಲ್ಲಿ ರಾಜಶೇಖರ್ ಎಂಬುವವರನ್ನು ಅವರ ಪತ್ನಿ ಮಾಲಾಶ್ರೀ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಗಳ ನಡುವೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ನಿರಂತರವಾಗಿ ಜಗಳ ನಡೆಯುತ್ತಿತ್ತು. ಬ್ಯಾಂಕ್ ಉದ್ಯೋಗಿಯಾಗಿದ್ದ ರಾಜಶೇಖರ್ ಪ್ರತಿದಿನ ಮದ್ಯ ಸೇವಿಸಿ ಬಂದು ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮಾನಸಿಕ ಖಿನ್ನತೆಯಿಂದ ಚಿಕಿತ್ಸೆ ಪಡೆದಿದ್ದ ಮಾಲಾಶ್ರೀ ಸದ್ಯ ಎರಡು ತಿಂಗಳ ಗರ್ಭಿಣಿಯಾಗಿದ್ದು, ಘಟನೆಯ ಬಳಿಕ ಅತಿಯಾದ ರಕ್ತಸ್ರಾವದಿಂದ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಂಚಿಕೊಳ್ಳಿ: