ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಸ್ಪಾ ಮಾಲೀಕನಿಗೆ ಬೆದರಿಸಿ ಹಣ ಸುಲಿಗೆ ಮಾಡಿದ ಆರು ಮಂದಿ ಬಂಧನ

ಮಾಧ್ಯಮ ಪ್ರತಿನಿಧಿಗಳು ಹಾಗೂ ಸಂಘಟನೆಯ ಕಾರ್ಯಕರ್ತರೆಂದು ಹೇಳಿಕೊಂಡು ವಿದ್ಯಾರಣ್ಯಪುರದ ಸ್ಪಾ ಮಾಲೀಕರಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸ...

· ಬೆಂಗಳೂರು ನಗರ
ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ವಸೂಲಿ: ನಾಲ್ವರು ಮಹಿಳೆಯರು ಸೇರಿ ಆರು ಮಂದಿ ಅರೆಸ್ಟ್!
ಹಂಚಿಕೊಳ್ಳಿ:

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಸ್ಪಾ ಒಂದಕ್ಕೆ ನುಗ್ಗಿದ ತಂಡವು ತಾವೇ ಸಂಘಟನೆಯ ಸದಸ್ಯರು ಹಾಗೂ ಪತ್ರಕರ್ತರೆಂದು ಸುಳ್ಳು ಹೇಳಿ ಸಿಬ್ಬಂದಿಯನ್ನು ಬೆದರಿಸಿದೆ. ಅಕ್ರಮ ಚಟುವಟಿಕೆಗಳ ಆರೋಪ ಹೊರಿಸಿ ದೃಶ್ಯಗಳನ್ನು ವೈರಲ್ ಮಾಡುವುದಾಗಿ ಹೆದರಿಸಿ ಲಕ್ಷಾಂತರ ರೂಪಾಯಿಗೆ ಬೇಡಿಕೆ ಇಟ್ಟು ಹಣ ವಸೂಲಿ ಮಾಡಲಾಗಿತ್ತು. ಈ ಸಂಬಂಧ ಸಾಯಿ ನಗರದ ಸ್ಪಾ ಮಾಲೀಕರು ನೀಡಿದ ದೂರಿನ ಮೇರೆಗೆ ಕೆ.ಆರ್. ಸರ್ಕಲ್ ಬಳಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 80,000 ರೂಪಾಯಿ ನಗದು, ವಾಹನಗಳು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಹಂಚಿಕೊಳ್ಳಿ: