ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಬೆಂಗಳೂರು: ಮಾರತಹಳ್ಳಿಯ ವಿಲ್ಲಾದಲ್ಲಿ ನಡೆಯುತ್ತಿದ್ದ ಅಕ್ರಮ ಪೂಲ್ ಪಾರ್ಟಿ ಮೇಲೆ ಸಿಸಿಬಿ ದಾಳಿ

ಬೆಂಗಳೂರಿನ ಮಾರತಹಳ್ಳಿಯ ಖಾಸಗಿ ವಿಲ್ಲಾದಲ್ಲಿ ದೀಪಾವಳಿ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ. ಸಿಸಿಬಿ ದಾಳಿ ವೇಳೆ ಖಾಸಗಿ ಪಾರ್ಟಿ ಹೆಸ...

· ಬೆಂಗಳೂರು ನಗರ
ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಹಂಚಿಕೊಳ್ಳಿ:

ಬೆಂಗಳೂರಿನ ಯಮಲೂರು ಕರಿಯಮ್ಮನ ಅಗ್ರಹಾರ ರಸ್ತೆಯಲ್ಲಿರುವ ಖಾಸಗಿ ವಿಲ್ಲಾದಲ್ಲಿ ದೀಪಾವಳಿ ನೆಪದಲ್ಲಿ ಆಯೋಜಿಸಲಾಗಿದ್ದ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಅರಿಹಂತ್ ಪಾಂಡೆ, ಅಭಿನವ್ ಪಾಂಡೆ ಮತ್ತು ಪಾರ್ಥ ಎಂಬ ಮೂವರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವಕರಿಗೆ ಆಮಿಷವೊಡ್ಡಿ ಆನ್ಲೈನ್ ಆ್ಯಪ್ ಮೂಲಕ ಹಣ ವಸೂಲಿ ಮಾಡುತ್ತಿದ್ದ ಆರೋಪಿಗಳು, ಯಾವುದೇ ಅನುಮತಿ ಪಡೆಯದೆ ಡ್ರಗ್ಸ್ ಮತ್ತು ಮದ್ಯದೊಂದಿಗೆ ಪಾರ್ಟಿ ನಡೆಸುತ್ತಿದ್ದರು. ದಾಳಿ ವೇಳೆ ಗಾಂಜಾ, ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ: