ಬೆಂಗಳೂರು: ಸೀಗೇಹಳ್ಳಿಯಲ್ಲಿ ತಂದೆಯ ಕಣ್ಣೆದುರೇ ನಾಲ್ಕನೇ ಮಹಡಿಯಿಂದ ಜಿಗಿದು ವಿಜ್ಞಾನಿ ಆತ್ಮಹತ್ಯೆ
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಡಿಆರ್‌ಡಿಒ ಅಂಗಸಂಸ್ಥೆಯ ಹಿರಿಯ ವಿಜ್ಞಾನಿ ಶರದ್ ಕಟಿಯಾರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ತಂದೆಯ ಕಣ್ಣೆದುರೇ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ...

ಬೆಂಗಳೂರಿನ ಸೀಗೇಹಳ್ಳಿಯಲ್ಲಿ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯ ಹಿರಿಯ ವಿಜ್ಞಾನಿ ಶರದ್ ಕಟಿಯಾರ್ ಅವರು ನಾಲ್ಕನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 47 ವರ್ಷದ ಶರದ್ ಅವರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆ ನಡೆದ ದಿನ ಮಗನ ವರ್ತನೆಯನ್ನು ಗಮನಿಸಿದ ವೃದ್ಧ ತಂದೆ ಅವರನ್ನು ತಡೆಯಲು ಪ್ರಯತ್ನಿಸಿದರಾದರೂ, ವಯಸ್ಸಿನ ಕಾರಣದಿಂದ ಸಾಧ್ಯವಾಗಲಿಲ್ಲ. ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆ.ಆರ್. ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




