ಧರ್ಮಸ್ಥಳ: ಚಾರ್ಮಾಡಿ ಸೇತುವೆ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಸೇತುವೆಯ ಮೇಲೆ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಈ ಸಂಬಂಧ ವಿಶ್ವನಾಥ ಯು ಎಂಬವರು ದೂರು ನೀಡಿದ್ದಾರೆ. ದೂರಿನ ಪ್ರಕಾರ, ಇಂಟರ್ ನ್ಯಾಷನಲ...

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ಸೇತುವೆಯ ಮೇಲೆ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಈ ಸಂಬಂಧ ವಿಶ್ವನಾಥ ಯು ಎಂಬವರು ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಇಂಟರ್ ನ್ಯಾಷನಲ್ ಪವರ್ ಕಾರ್ಪೋರೇಷನ್ ಪ್ರೈವೆಟ್ ಲಿಮಿಟೆಡ್ ಚಾರ್ಮಾಡಿ ಘಟಕದಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ವಿಶ್ವನಾಥ ಅವರು, ದಿನಾಂಕ 04-11-2026 ರಂದು ಬೆಳಿಗ್ಗೆ 6-00 ಗಂಟೆಗೆ ಕಂಪನಿಯ ಜೀಪಿನಲ್ಲಿ ಚಾಲಕ ಮತ್ತು ದಿನೇಶ್ ಗೌಡ ಎಂಬವರೊಂದಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು.
ಈ ವೇಳೆ ಚಾರ್ಮಾಡಿ ಅರಣ್ಯ ಇಲಾಖೆಯ ಕಳ್ಳಬೇಟೆ ಶಿಬಿರದ ಪಕ್ಕದಲ್ಲಿರುವ ಮೃತ್ಯುಂಜಯ ನದಿಯ ಸೇತುವೆಯ ಮೇಲ್ಗಡೆ ಮೃತದೇಹವೊಂದು ಕಂಡುಬಂದಿದೆ. ಸುರಿದ ಮಳೆಯ ಕಾರಣದಿಂದ ನದಿಯ ನೀರಿನಲ್ಲಿ ಮೃತದೇಹ ತೇಲಿಕೊಂಡು ಬಂದು, ನೀರಿನ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸೇತುವೆಯಲ್ಲಿ ಸಿಲುಕಿಕೊಂಡಿರಬಹುದು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೃತದೇಹವು ಅಂದಾಜು 10 ದಿನಗಳ ಹಿಂದೆ ಮೃತಪಟ್ಟಿರುವಂತೆ ಕಂಡುಬರುತ್ತಿದೆ ಎಂದು ದೂರುದಾರರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 83/2026, ಕಲಂ 194 (3)(4) ಭಾ.ನಾ.ಸು.ಸಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.



