ಗಂಗೊಳ್ಳಿ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರು ಪಾಲಾಗಿ ಸಾವು
ಗಂಗೊಳ್ಳಿ ಸಮೀಪದ ಹೊಸಾಡು ಗ್ರಾಮದ ಕೆರೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಸುನೀತಾ ಮತ್ತು ವೈಶಾಲಿ ಎಂಬ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ದಿ...

ಗಂಗೊಳ್ಳಿ ಸಮೀಪದ ಹೊಸಾಡು ಗ್ರಾಮದ ಕೆರೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಸುನೀತಾ ಮತ್ತು ವೈಶಾಲಿ ಎಂಬ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದೂರಿನ ಪ್ರಕಾರ, ದಿನಾಂಕ 25/10/2026 ರಂದು ಮಧ್ಯಾಹ್ನ 03:00 ಗಂಟೆ ಸುಮಾರಿಗೆ ಹೊಸಾಡು ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯಲ್ಲಿ ಓದುತ್ತಿದ್ದ ಸುನೀತಾ ಮತ್ತು ವೈಶಾಲಿ ಸೇರಿದಂತೆ ಇತರ ಮಕ್ಕಳು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದರು.
ಮಧ್ಯಾಹ್ನ 03:45 ಗಂಟೆ ಸುಮಾರಿಗೆ ಕೆರೆಯ ದಡದಲ್ಲಿ ಬಟ್ಟೆ ಒಗೆಯುತ್ತಿದ್ದಾಗ ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುನೀತಾಳನ್ನು ರಕ್ಷಿಸಲು ವೈಶಾಲಿ ಪ್ರಯತ್ನಿಸಿದಾಗ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಚಂದ್ರು ಬಸವರಾಜ ವೇಷಗಾರ ಅವರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 22/2026 ಕಲಂ: 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಗಂಗೊಳ್ಳಿ ಪೊಲೀಸ್ ಠಾಣೆ



