ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಕಾರ್ಕಳ: ಎಲೆಕ್ಟ್ರಿಕ್ ಸ್ಕೂಟಿ ಡಿಕ್ಕಿ ಹೊಡೆದು ಪಾದಚಾರಿ ಗಾಯ, ಪ್ರಕರಣ ದಾಖಲು

ಕಾರ್ಕಳದ ಬಜಗೋಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಕೇಶವ ಡಿ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ...

· ಉಡುಪಿ
ರಸ್ತೆ ಅಪಘಾತ
ಹಂಚಿಕೊಳ್ಳಿ:

ಕಾರ್ಕಳದ ಬಜಗೋಳಿಯಲ್ಲಿ ಎಲೆಕ್ಟ್ರಿಕ್ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಕೇಶವ ಡಿ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ದಿನಾಂಕ 21-10-2026 ರಂದು ಸಂಜೆ 18:45 ಗಂಟೆಗೆ ಕೇಶವ ಡಿ ಅವರು ಬಜಗೋಳಿಯ ಭುವನೇಶ್ವರಿ ಹೋಟೆಲ್ ಬಳಿಯ ಆಟೋ ನಿಲ್ದಾಣದ ಬಳಿ ನಿಂತಿದ್ದರು. ಈ ವೇಳೆ ಕಾರ್ಕಳದಿಂದ ಬಜಗೋಳಿ ಕಡೆಗೆ ಮಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರದ್ಯುಮ್ನ ಎಂಬವರು ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಸಹಸವಾರಳನ್ನು ಕುರಿಸಿಕೊಂಡು ವೇಗವಾಗಿ ಬಂದಿದ್ದಾರೆ.

ಸ್ಕೂಟಿ ಸವಾರ ಪ್ರದ್ಯುಮ್ನ ಅವರು ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶೀನ ಗೌಡ ಎಂಬವರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಅಪಘಾತದ ಪರಿಣಾಮ ಶೀನ ಗೌಡ ಅವರು ರಸ್ತೆಗೆ ಬಿದ್ದು ತಲೆಗೆ ಗಂಭೀರ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಪಘಾತದ ಬಳಿಕ ಗಾಯಗೊಂಡ ಶೀನ ಗೌಡ ಅವರನ್ನು ಕೂಡಲೇ ವಾಹನವೊಂದರಲ್ಲಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಸ್ಕೂಟಿ ಸವಾರ ಮತ್ತು ಸಹಸವಾರರಿಬ್ಬರೂ ಸ್ಕೂಟಿ ಸಮೇತ ಬಿದ್ದು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 87/2026 ರಂತೆ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಮತ್ತು 125 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ — ಅಪರಾಧ ಕ್ರಮಾಂಕ 87/2026

ಹಂಚಿಕೊಳ್ಳಿ: