ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಕಡಬ: ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರ ದಾಳಿ, ಓರ್ವನ ಬಂಧನ

ಕಡಬ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದಾಗ ಕಡಬ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ದೂರಿನ ಪ್ರಕಾರ, ನವೆಂಬರ್ 9...

· ದಕ್ಷಿಣ ಕನ್ನಡ
ಪೊಲೀಸ್ ವಾಹನ
ಹಂಚಿಕೊಳ್ಳಿ:

ಕಡಬ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದಾಗ ಕಡಬ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ದೂರಿನ ಪ್ರಕಾರ, ನವೆಂಬರ್ 9, 2026 ರಂದು ಸಂಜೆ ಈ ಘಟನೆ ನಡೆದಿದೆ.

ಕಡಬ ಪೊಲೀಸ್ ಠಾಣೆಯ ಪ್ರಭಾರ ಉಪನಿರೀಕ್ಷಕ ಸಂತೋಷ್ ಬಿ ಪಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೆಲವರು ಗುಂಪು ಸೇರಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿದೆ.

ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಸ್ಥಳದಲ್ಲಿದ್ದವರು ಪರಾರಿಯಾಗಲು ಪ್ರಯತ್ನಿಸಿದ್ದು, ಈ ಪೈಕಿ ಕಡಬ ಚಾರ್ವಾಕ ನಿವಾಸಿ ಬಾಲಕೃಷ್ಣ ಎಂಬಾತನನ್ನು ಪೊಲೀಸರು ಹಿಡಿದಿದ್ದಾರೆ. ಆತನನ್ನು ತಪಾಸಣೆ ನಡೆಸಿದಾಗ ಜೂಜಾಟದಿಂದ ಗಳಿಸಿದ್ದ 1030 ರೂಪಾಯಿ ನಗದು ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನಾ ಸ್ಥಳದಲ್ಲಿದ್ದ ಐದು ಅಂಕದ ಕೋಳಿಗಳು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಕತ್ತಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 133/2026, ಕಲಂ: 87, 93 ಕರ್ನಾಟಕ ಪೊಲೀಸ್ ಕಾಯ್ದೆ-1963, ಕಲಂ: 11(1)(m)(ii), 11(1)(n) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಹಾಗೂ ಕಲಂ: 112, r/w 3(5) ಬಿಎನ್ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಕಡಬ ಪೊಲೀಸ್ ಠಾಣೆ

ಹಂಚಿಕೊಳ್ಳಿ: