ಕಲಬುರಗಿಯಲ್ಲಿ ಉಗ್ರ ಸಂಘಟನೆ ನಂಟು ಆರೋಪ: ಪಶ್ಚಿಮ ಬಂಗಾಳದ ಮಮ್ತಾಜ್ವುಲ್ ಮಲೀಕ್ ವಶ
ಉಗ್ರ ಸಂಘನೆ ಲಷ್ಕರ್-ಎ-ತೈಬಾ ಜೊತೆ ನಂಟು ಹೊಂದಿರುವ ಶಂಕೆ ಮೇರೆಗೆ ಕಲಬುರಗಿಯ ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ...

ಕಲಬುರಗಿಯ ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಎಂಬಾತನನ್ನು ಪೊಲೀಸರು ಮತ್ತು ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕ ಹೊಂದಿದ್ದನೆಂದು ಆರೋಪಿಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಯು ತನ್ನ ಸಹೋದರನೊಂದಿಗೆ ಕೆಲಸ ಮಾಡುತ್ತಿದ್ದಾಗ ಉಗ್ರರೊಂದಿಗೆ ಗೌಪ್ಯ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಈತನನ್ನು ವಶಕ್ಕೆ ಪಡೆದು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.




