ಕೊಡಗು: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ!
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆಯಲ್ಲಿ ನಾಲ್ವರು ಅಕ್ರಮ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾಗಿದ್ದಾರೆ. ಸ್ಥಳೀಯ ತೋಟದ ಮನೆಯೊಂದರಲ್ಲಿ ಆಶ್ರಯ ಪಡೆದಿದ್ದ ಇವರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀ...

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಸ್ಥಳೀಯರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಲ್ಲಾಳಿಯ ನೆರವಿನಿಂದ ಗಡಿ ದಾಟಿ ಬಂದಿರುವುದಾಗಿ ಒಪ್ಪಿಕೊಂಡಿರುವ ಇವರು, ತೋಟದ ಮನೆಯೊಂದರಲ್ಲಿ ಆಶ್ರಯ ಪಡೆದಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆಪರೇಷನ್ ಮುಕ್ತ ಕಾರ್ಯಾಚರಣೆಯ ಮೂಲಕ 160ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಗಡೀಪಾರು ಮಾಡಲಾಗಿತ್ತು. ಇದೀಗ ಮಲೆನಾಡು ಭಾಗಕ್ಕೂ ಅಕ್ರಮ ವಲಸಿಗರು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಸಮಗ್ರ ತನಿಖೆಗೆ ಆಗ್ರಹ ವ್ಯಕ್ತವಾಗಿದೆ.




