ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಕೊಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್ ಕುಸಿತ: 17 ಭಕ್ತರ ಸಾವು, ಪ್ರಧಾನಿ ಮೋದಿ ಪರಿಹಾರ ಘೋಷಣೆ

ಪಶ್ಚಿಮ ಬಂಗಾಳದ ಕೊಲ್ಕತ್ತಾದ ದುರ್ಗಾ ಪೂಜೆಯ ಸಂಭ್ರಮದ ನಡುವೆಯೇ ಅನಾಹುತವೊಂದು ಸಂಭವಿಸಿದೆ. ಇಂದು ಸಂಜೆ ಜನದಟ್ಟಣೆಯ ಅಧಿಕ ಒತ್ತಡದಿಂದಾಗಿ ಮಧ್ಯ ಕೋಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ಪೂಜಾ ಪೆಂಡಾಲ್‌ನ ಒಂದು...

ಕೊಲ್ಕತ್ತಾದ ಕಾಲ್ತುಳಿತದಲ್ಲಿ 17 ಭಕ್ತರು ಸಾವು; ಪ್ರಧಾನಿ ಮೋದಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾಣ ಘೋಷಣೆ
ಹಂಚಿಕೊಳ್ಳಿ:

ಕೊಲ್ಕತ್ತಾದ ಚೋರ್‌ಬಾಗನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೂಜಾ ಪೆಂಡಾಲ್‌ನಲ್ಲಿ ಭಾನುವಾರ ಸಂಭವಿಸಿದ ಕಾಲ್ತುಳಿತ ಮತ್ತು ಪೆಂಡಾಲ್ ಕುಸಿತದಿಂದ 17 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಲ್ಕತ್ತಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಸುವೇಂದು ಅಧಿಕಾರಿ ಮತ್ತು ಸಮಿಕ್ ಭಟ್ಟಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮಮತಾ ಬ್ಯಾನರ್ಜಿ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಹಂಚಿಕೊಳ್ಳಿ: