ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಅಪರಾಧ

ಕೊಪ್ಪಳ: ಮದುವೆಗೆ ಅಡ್ಡಿ ಆರೋಪಿಸಿ ತುಂಗಭದ್ರಾ ಜಲಾಶಯದಲ್ಲಿ ಶಿಕ್ಷಕಿ ಆತ್ಮಹತ್ಯೆ

ಕೊಪ್ಪಳದ ಖಾಸಗಿ ಶಾಲಾ ಶಿಕ್ಷಕಿ ಸಂಗೀತ ಮೇಟಿ ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಬಿದ್ದು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. 14 ವರ್ಷಗಳ ಪ್ರೇಮ ಸಂಬಂಧ ಹಾಗೂ ಮದುವೆಗೆ ಅಡ್ಡಿಯಾದ ಹಿನ್ನೆಲೆಯಲ್ಲಿ ಅವರು ಡೆತ್‌ನೋಟ್ ಬರೆದಿಟ್...

· ಕೊಪ್ಪಳ
14 ವರ್ಷದ ಪ್ರೀತಿಗೆ ವಿರೋಧ; ಡೆತ್‌ನೋಟ್‌ನಲ್ಲಿ ಮೂವರ ಹೆಸ್ರು ಬರೆದು ಪ್ರಾಣಬಿಟ್ಟ ಶಿಕ್ಷಕಿ
ಹಂಚಿಕೊಳ್ಳಿ:

ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಖಾಸಗಿ ಶಾಲೆಯ ಶಿಕ್ಷಕಿ ಸಂಗೀತ ಮೇಟಿ ಅವರು ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು ಹದಿನಾಲ್ಕು ವರ್ಷಗಳಿಂದ ವಿಕಾಸ್ ಎಂಬುವವರನ್ನು ಪ್ರೀತಿಸುತ್ತಿದ್ದ ಸಂಗೀತ, ಮದುವೆಗೆ ಸಂಬಂಧಿಕರಿಂದ ಅಡ್ಡಿಯಾಗುತ್ತಿತ್ತು ಎಂದು ಆರೋಪಿಸಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ವಿಕಾಸ್, ವಸಂತ್ ಕೊಪ್ಪದ್ ಹಾಗೂ ರೇಣುಕಾ ಅವರ ಹೆಸರನ್ನು ಉಲ್ಲೇಖಿಸಿ, ಇವರೇ ತಮ್ಮ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಮೂವರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಹಂಚಿಕೊಳ್ಳಿ: